ಕಾರವಾರ: ಡೆತ್ ನೋಟ್ ಬರೆದಿಟ್ಟು ಹೊಟೇಲಿನಲ್ಲಿ ಸಹಾಯಕ ಕಮಿಷನರ್ ಕಚೇರಿ ನೌಕರ ಆತ್ಮಹತ್ಯೆ

ಕಾರವಾರ: ನಗರದ ಉಪ ವಿಭಾಗಾಧಿಕಾರಿಗಳ ಕಚೇರಿ ನೌಕರನೋರ್ವ ಖಾಸಗಿ ಹೊಟೇಲಿನ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಹೊನ್ನಾವರ ಮೂಲದ ಈಶ್ವರ ಭಟ್ಟ (38) ನೇಣಿಗೆ ಶರಣಾದ ಎಂದು ಗುರುತಿಸಲಾಗಿದೆ. ಇವರು ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ನನ್ನ ಅನಾರೋಗ್ಯದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ. ಈ ಬಗ್ಗೆ ಯಾರಿಗೂ ತೊಂದರೆ ನೀಡಬೇಡಿ ಎಂದು ಪತ್ರ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾನು ನಿಮಗಾಗಿ ಆಸ್ತಿ ಮಾಡಿಲ್ಲ, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಪತ್ನಿಗೆ ಹೇಳಿದ್ದು ಪತ್ರದಲ್ಲಿ ಕ್ಷಮೆಯಾಚನೆ ಮಾಡಿದ್ದಾರೆ. ಪತ್ನಿ ಮತ್ತು ಪೊಲೀಸರಿಗೆ ಪ್ರತ್ಯೇಕ ಡೆತ್‌ನೋಟ್ ಅನ್ನು ಇರಿಸಿದ್ದಾರೆ. ಮೃತರ ಪತ್ನಿಯು ಕಾರವಾರದ ತಹಶೀಲ್ದಾರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಉಪವಿಭಾಗಾಧಿಕಾರಿ ವಿಜಯಲಕ್ಷ್ಮೀ ರಾಯಕೋಡ, ಡಿವೈಎಸ್‌ಪಿ ವ್ಯಾಲಂಟೈನ್ ಡಿಸೋಜಾ, ತಹಸೀಲ್ದಾರ ನಿಶ್ಚಲ ನರೋನಾ, ನಗರ ಠಾಣೆಯ ಪಿಎಸ್ಐ ಸಂತೋಷಕುಮಾರ ನೇತೃತ್ವದ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

 

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement