ಕುಂದಾಪುರ: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕಾಲೇಜ್‌ ಒಳಗೆ ಪ್ರವೇಶ ನಿರಾಕರಣೆ

ಕುಂದಾಪುರ: ಉಡುಪಿ ಹಿಜಾಬ್ ವಿವಾದ ಈಗ ಕುಂದಾಪುರ ಸರಕಾರಿ ಕಾಲೇಜಿನಲ್ಲಿಯೂ ಪ್ರತಿಧ್ವನಿಸಿದ್ದು ಇಂದು, ಗುರುವಾರ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು ತರಗತಿಗೆ ಪ್ರವೇಶ ನಿರಾಕರಿಸಿದ್ದಾರೆ.
ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರು ಕಾಲೇಜಿನ ಗೇಟ್ ಬಳಿ ತಡೆದಿದ್ದಾರೆ.ಸರ್ಕಾರದ ಸುತ್ತೋಲೆಯಂತೆ ಹಿಜಾಬ್‌ ಇಲ್ಲದೆ ತರಗತಿಗೆ ಬರುವಂತೆ ಸೂಚನೆ ನೀಡಿದ್ದಾರೆ. ಈ ಸಂದರ್ಭ ಗೇಟ್ ಬಳಿ ಪ್ರಾಂಶುಪಾಲರ ಜೊತೆ ವಿದ್ಯಾರ್ಥಿನಿಯರ ವಾಗ್ವಾದ ನಡೆದಿದ್ದು, ಸರಕಾರದ ಆದೇಶದಲ್ಲಿ ಕುಂದಾಪುರ ಕಾಲೇಜು ಉಲ್ಲೇಖವಿಲ್ಲ ಎಂದು ವಿದ್ಯಾರ್ಥಿನಿಯರು ಪ್ರಾಂಶುಪಾಲರ ಜೊತೆ ವಾದ ಮಾಡಿದ್ದಾರೆ, ಆದರೆ ಪ್ರಾಂಶುಪಾರಲರು ಸರಕಾರ ಇಡೀ ರಾಜ್ಯಕ್ಕೆ ಸುತ್ತೋಲೆ ಹೊರಡಿಸಲಾಗಿದೆ. ಅದು ಕೇವಲ ಉಡುಪಿ ಕಾಲೇಜಿಗೆ ಮಾತ್ರ ಅನ್ವಯವಾಗುವುದಿಲ್ಲ, ಇಡೀ ರಾಜ್ಯಕ್ಕೇ ಅನ್ವಯವಾಗುತ್ತದೆ. ರಾಜ್ಯದಲ್ಲಿ 1200ಕ್ಕೂ ಅಧಿಕ ಕಾಲೇಜಿದೆ. ಪ್ರತಿಯೊಂದು ಕಾಲೇಜಿಗೂ ನೋಟಿಸ್ ನೀಡಲು ಆಗುವುದಿಲ್ಲ. ಸರ್ಕಾರ ಏನು ಹೇಳುತ್ತದೋ ಅದನ್ನು ನಾವು ಅನುಸರಿಸುತ್ತೇವೆ ಎಂದು ಸಮಜಾಯಿಷಿ ನೀಡಿದರು. ಆದರೆ ವಿದ್ಯಾರ್ಥಿನಿಯರು ತಮ್ಮ ವಾದ ಮುಂದುವರಿಸಿದ್ದರಿಂದ ಅವರಿಗೆ ಪ್ರವೇಶ ನಿರಾಕರಿಸಲಾಯಿತು.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ನಿನ್ನೆ, ಬುಧವಾರ ನೂರಾರು ವಿದ್ಯಾರ್ಥಿಗಳು ಬುಧವಾರ ಕೇಸರಿ ಶಾಲುಗಳನ್ನು ಹೊದೆದು ಕಾಲೇಜು ಕ್ಯಾಂಪಸ್ ಪ್ರವೇಶಿಸಿದ್ದರು. ನಂತರ ಸ್ಥಳೀಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರೊಂದಿಗೆ ಪೊಷಕರ ಸಭೆ ನಡೆದಿತ್ತು. ಆದರೆ ಸಭೆ ಒಮ್ಮತಕ್ಕೆ ಬರಲು ವಿಫಲವಾಗಿತ್ತು.

ಪ್ರಮುಖ ಸುದ್ದಿ :-   41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement