ಶಾಲಾ-ಕಾಲೇಜುಗಳಿಗೆ ಯಾರೂ ಹಿಜಾಬ್, ಕೇಸರಿ ಶಾಲು ಧರಿಸಿ ಬರುವಂತಿಲ್ಲ: ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಎಂದು ಈಗಾಗಲೇ ಶಿಕ್ಷಣ ಸಚಿವರು ಹೇಳಿದ್ದಾರೆ. ಧರ್ಮಾಚರಣೆಗೆ ಚರ್ಚ್, ಮಸೀದಿ, ಮಂದಿರಗಳಿವೆ. ಶಾಲೆಗಳಲ್ಲಿ ಹಿಜಾಬ್‌, ಕೇಸರಿ ಶಾಲು ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ‌.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶಾಲೆಗಳಲ್ಲಾದರೂ ಮಕ್ಕಳು ದೇಶದ ಐಕ್ಯತೆ ಬಗ್ಗೆ ಸಂಸ್ಕಾರ ಪಡೆಯಬೇಕು. ಎಲ್ಲರೂ ಕೂಡಾ ಈ ಬಗ್ಗೆ ಯೋಚನೆ ಮಾಡಬೇಕು ಎಂದರು.
ಹಿಜಾಬ್ ಹಿಂದೆ ಇರುವ ಮತೀಯ ಸಂಘಟನೆಗಳ ಬಗ್ಗೆ ಗಮನ ಕೊಡಲು ಪೊಲೀಸರಿಗೆ ಹೇಳಿದ್ದೇನೆ. ರಾಷ್ಟ್ರ ಒಗ್ಗಟ್ಟಾಗಬೇಕು ಎಂಬುದಕ್ಕೆ ಅಡ್ಡಗಾಲಾಗುವವರನ್ನು ಸರಿ ಮಾಡುವ ಕೆಲಸ ನಾವು ಮಾಡಬೇಕಾಗುತ್ತದೆ. ಯಾವುದೇ ಧರ್ಮದವರು ಅವರವರ ಧರ್ಮ ಆಚರಣೆ ಮಾಡಲಿ. ಆದರೆ ಶಾಲೆಗಳಲ್ಲಿ ಅದು ಬೇಡ. ಶಾಲೆಗಳಲ್ಲಿ ಎಲ್ಲರೂ ಸೇರಿ ಭಾರತ ಮಾತೆಯ ಮಕ್ಕಳು ಎಂದು ವ್ಯಾಸಂಗಕ್ಕೆ ಬರಬೇಕು ಎಂದು ಅಭಿಪ್ರಾಯಪಟ್ಟರು.
ಶಾಲಾ-ಕಾಲೇಜುಗಳ ಕಾಂಪೌಂಡ್ ಒಳಗೆ ಹಿಜಾಬ್,ಹಸಿರು ಶಾಲು, ಕೇಸರಿ ಶಾಲು ಧರಿಸುವುದು ಬೇಡ. ಶಾಲಾ ಆಡಳಿತ ಮಂಡಳಿ ಹೇಳುವ ರೀತಿ ನಡೆದುಕೊಳ್ಳಬೇಕು ಎಂದು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement