ಹಾವು ತಪ್ಪಿಸಲು ಹೋಗಿ ತುಂಗಾ ನಾಲೆಗೆ ಬಿದ್ದ ಕಾರು; ಪತ್ನಿ ಸಾವು, ಪತಿ ಪಾರು

ಶಿವಮೊಗ್ಗ : ಗಾಜನೂರು ಬಳಿ ದಾರಿಗೆ ಅಡ್ಡಬಂದ ಹಾವನ್ನು ತಪ್ಪಿಸಲು ಹೋಗಿ ಕಾರೊಂದು ತುಂಗಾ ಎಡದಂಡೆ ನಾಲೆಗೆ ಬಿದ್ದುಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಚಾಲನೆ ಮಾಡುತ್ತಿದ್ದ ಪತಿ ಚೇತನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುರುವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನೀರಿನಲ್ಲಿ ಮುಳುಗಿ ಸುಷ್ಮಾ( 28) ಎಂಬವರು ಮೃತಪಟ್ಟಿದ್ದು ಪತಿ ಚೇತನಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚೇತನ್ ತಾಯಿಯ ಅನಾರೋಗ್ಯದ ವಿಷಯ ಗೊತ್ತಾಗಿ ತಡರಾತ್ರಿಯೇ ದಂಪತಿ ಶಿವಮೊಗ್ಗದಿಂದ ತುಮಕೂರಿಗೆ ಹೊರಟಿದ್ದರು ಎಂದು ತಿಳಿದು ಬಂದಿದೆ.
ನಾಲೆಯ ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದಾಗ ಕಾರಿಗೆ ಹಾವು ಅಡ್ಡಬಂದಿದ್ದರಿಂದ ಚೇತನ್‌ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಕಾರು ನಾಲೆಗೆ ಉರುಳಿದೆ ಎನ್ನಲಾಗಿದೆ.
ಈ ವೇಳೆ ಚೇತನಕುಮಾರ್ ಸಹಾಯಕ್ಕಾಗಿ ಕೂಗಿ ಕೊಂಡಿದ್ದಾರೆ. ಶಬ್ದದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಸ್ಥಳೀಯರು ಚೇತನ್ ಅವರನ್ನು ರಕ್ಷಣೆ ಮಾಡಿದ್ದು, ಕಾರಿನೊಳಗೆ ನೀರು ತುಂಬಿದ್ದರಿಂದ ಅಷ್ಟರಲ್ಲಾಗಲೇ ಸುಷ್ಮಾ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement