ಕೊರಗಜ್ಜ ದೈವಕ್ಕೆ ಅವಮಾನ ಪ್ರಕರಣ: ಕೇರಳದಲ್ಲಿ ಪ್ರಮುಖ ಆರೋಪಿ ಬಂಧನ

ಮಂಗಳೂರು: ಸಾಲೆತ್ತೂರು ಅಗರಿಯಲ್ಲಿನ ವಧುವಿನ ಮನೆಗೆ ಬರುವಾಗ ಮದುಮಗ ಕೊರಗಜ್ಜ ದೈವದ ರೀತಿಯ ವೇಷ ಭೂಷಣದ ಧರಿಸಿ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.
ಕೇರಳ ಉಪ್ಪಳ ಅಗರ್ತಿಮೂಲ ಉಮರುಲ್ ಭಾಷಿತ್ (28) ಬಂಧಿತ ಆರೋಪಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನಲ್ಲಿ ಬಟ್ಟೆ ಅಂಗಡಿ ನಡೆಸುತ್ತಿರುವ ಕುಂಬಳೆ ಮಂಗಳಪಾಡಿ ನಿವಾಸಿ ಅಹ್ಮದ್ ಮುಜಿತಾಬು (27), ಗಾಳಿಯಡ್ಕ ಬಾಯಾರುಪದವು ನಿವಾಸಿ ಮೊಯ್ದೀನ್ ಮುನಿಶ್ (19) ಎಂಬವರನ್ನು ಈ ಮೊದಲು ಬಂಧಿಸಲಾಗಿತ್ತು. ಪ್ರಮುಖ ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇತ್ತೀಚಿಗೆ ನ್ಯಾಯಾಲಯ ವಜಾಗೊಳಿಸಿದ ಹಿನ್ನೆಲೆಯಲ್ಲಿ ಪೊಲೀಸರು ಈತನನ್ನು ಬಂಧಿಸಿದ್ದಾರೆ.
ಕೊಳ್ನಾಡು ಗ್ರಾಮದ ಅಬ್ದುಲ್ ಅಝೀಝ್ ಅವರ ಪುತ್ರಿ ಮದುವೆ ದಿನ ಮುಸ್ಲಿಂ ಸಂಪ್ರದಾಯದಂತೆ ವರ ಸ್ನೇಹಿತರ ಜತೆಗೆ ವಧುವಿನ ಮನೆಗೆ ಆಗಮಿಸಿದ್ದಾನೆ. ತಡರಾತ್ರಿ ಆಗಮಿಸಿದ ವರನ ಬಳಗ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿದ್ದು, ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜ ದೈವವನ್ನು ಹೋಲುವ ವೇಷ ಭೂಷಣ ಧರಿಸಿದ ದೃಶ್ಯವನ್ನು ವರನ ಕಡೆಯವರೇ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಚೇತನ ಎಂಬವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ ನಂತರ ಪ್ರಕರಣ ದಾಖಲಾಗಿತ್ತು

ಪ್ರಮುಖ ಸುದ್ದಿ :-   ಕೆಪಿಎಸ್‌ಸಿ ಹಗರಣ; ಐಎಎಸ್‌ ಅಧಿಕಾರಿ ಜ್ಞಾನೇಂದ್ರಕುಮಾರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸರ್ಕಾರದ ಅನುಮತಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement