ಬೆಂಗಳೂರು: ಈ ಬಾರಿಯ ಗಣರಾಜ್ಯೋತ್ಸವದಲ್ಲಿ ರಾಜಧಾನಿ ದೆಹಲಿಯ ಪರೇಡ್‍ನಲ್ಲಿ ಗಮನಸೆಳೆದ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳಗಳ ತೊಟ್ಟಿಲು ವಿಷಯಧಾರಿತ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ ದೊರಕಿದೆ.
ಗಣರಾಜ್ಯೋತ್ಸವದ ಪರೇಡ್‍ನಲ್ಲಿ ಉತ್ತಮವಾಗಿ ಪ್ರದರ್ಶನಗೊಂಡ ರಾಜ್ಯಗಳ ಸ್ತಬ್ಧಚಿತ್ರಗಳ ಪೈಕಿ ಉತ್ತರ ಪ್ರದೇಶಕ್ಕೆ ಮೊದಲ ಸ್ಥಾನ ಸಿಕ್ಕರೆ, ದ್ವಿತೀಯ ಸ್ಥಾನ ಕರ್ನಾಟಕ್ಕೆ ದೊರೆತಿದೆ. ಮೇಘಾಲಯಕ್ಕೆ ತೃತೀಯ ಸ್ಥಾನ ದೊರಕಿದೆ.
ಈ ಬಾರಿ ದಕ್ಷಿಣ ಭಾರತದಿಂದ ಕರ್ನಾಟಕದ ಏಕೈಕ ಸ್ತಬ್ಧ ಚಿತ್ರ ಪ್ರದರ್ಶನ ಗೊಂಡಿತ್ತು. ರಾಜಪಥದಲ್ಲಿ ಪರೇಡ್ ಮಾಡಿದ ಕರ್ನಾಟಕದ ಸ್ತಬ್ಧ ಚಿತ್ರ ಗಮನಸೆಳೆಯಿತು. ಕರ್ನಾಟಕದ ಸ್ತಬ್ದ ಚಿತ್ರ ಸತತ 13ನೇ ವರ್ಷ ಪ್ರದರ್ಶನಗೊಂಡಿದ್ದು ಮತ್ತೊಂದು ವಿಶೇಷ.
ಕೇಂದ್ರ ಸಚಿವಾಲಯದ ಸ್ತಬ್ಧಚಿತ್ರಗಳ ಪೈಕಿ ಶಿಕ್ಷಣ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ಸಚಿವಾಲಯ ಜಂಟಿ ಅಗ್ರಸ್ಥಾನ ಪಡೆದುಕೊಂಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ