ಮುಂದುವರಿದ ಹಿಜಾಬ್‌ ವಿವಾದ: ಕುಂದಾಪುರ ಕಾಲೇಜಿಗೆ ನಾಳೆ ರಜೆ

ಉಡುಪಿ: ಕುಂದಾಪುರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್‌ ಮತ್ತು ಕೇಸರಿ ಶಲ್ಯ ವಿವಾದ ತಾರಕಕ್ಕೇರಿದ್ದು, ಕಾಲೇಜಿಗೆ ಶನಿವಾರ ರಜೆ ಘೋಷಿಸಲಾಗಿದೆ.  ಕಾಲೇಜಿನ ಪ್ರಾಂಶುಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ.
ಆಡಳಿತ ಮಂಡಳಿಯು ವಿದ್ಯಾರ್ಥಿಗಳನ್ನು ಕಾಲೇಜಿನ ಮೈದಾನದ ವರೆಗೆ ಮಾತ್ರ ಬಿಟ್ಟುಕೊಂಡಿದೆ. ಆದರೆ ತಮ್ಮನ್ನು ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕೊಡುವಂತೆ ಪ್ರಾಂಶುಪಾಲರನ್ನು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇಂದು, ಶುಕ್ರವಾರ ತರಗತಿಗೆ ಬಿಡುವಂತೆ ಒತ್ತಾಯಿಸಿದ್ದರೂ, ತರಗತಿಗೆ ಅವಕಾಶ ಕೊಟ್ಟಿಲ್ಲ. ಇದರಿಂದ ಪೋಷಕರು ಕಾಲೇಜು ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕುಂದಾಪುರ ಠಾಣಾ ಸರ್ಕಲ್ ಇನ್‌ಸ್ಪೆಕ್ಟರ್‌ ಶ್ರೀಕಾಂತ್, ಪ್ರತಿಭಟನೆ ನಡೆಸಿದರೆ ಎಫ್‌ಐಆರ್ ದಾಖಲಿಸುವ ಕುರಿತು ಎಚ್ಚರಿಸಿದ್ದಾರೆ. ನಂತರ ಕಾಲೇಜು ಸಿಬ್ಬಂದಿ ಕಾಲೇಜು ಗೇಟಿನ ಬೀಗ ಹಾಕಿದ್ದಾರೆ.ಗೇಟ್ ಬಳಿಯೇ ವಿದ್ಯಾರ್ಥಿನಿಯರು ಮಧ್ಯಾಹ್ನದ ಊಟ ಮಾಡಿದ್ದಾರೆ. ಸಂಜೆ ವರೆಗೂ ಗೇಟ್‌ ಬಳಿಯೇ ಇದ್ದ ವಿದ್ಯಾರ್ಥಿಯರು ಬುರ್ಖಾ ತೊಟ್ಟು ಮನೆಗೆ ವಾಪಾಸ್ಸಾಗಿದ್ದಾರೆ. ವಿದ್ಯಾರ್ಥಿನಿಯರ ಬಳಿ ಸೇರಿದ್ದ ಗುಂಪುಗಳನ್ನು ಪೊಲೀಸರು ಚದುರಿಸಿದ್ದಾರೆ. ಕಾಲೇಜು ಬಿಡುತ್ತಿದ್ದಂತೆಯೇ ವಿದ್ಯಾರ್ಥಿಗಳ ಬಳಿ ಎರಡು ಗುಂಪುಗಳ ಜಮಾವಣೆ ಆದವು. ಅವರನ್ನೂ ಪೊಲೀಸರು ಚದುರಿಸಿದರು.
ಶನಿವಾರ ಶಾಲಾ ಆಡಳಿತ ಮಂಡಳಿಯ ಸಭೆ ಕರೆಯಲಾಗಿದೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement