ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಇತ್ತಿಚಿಗಷ್ಟೆ ನಡೆದ ಸ್ವಾಮಿ ವಿವೇಕಾನಂದರ ೧೫೯ ನೇ ಜಯಂತಿ ಪ್ರಯುಕ್ತ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಕೊಡಮಾಡುವ ೨೦೨೦/೨೧ ನೇ ಸಾಲಿನ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಯನ್ನು ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಾರ್ವಜನಿಕ ಆಡಳಿತ ವಿಭಾಗದ ವಿದ್ಯಾರ್ಥಿ ಸಂಜಯಕುಮಾರ ಬಿರಾದಾರ ಅವರಿಗೆ ನೀಡಲಾಯಿತು.
ಯುವಸಬಲಿಕರಣ ಕ್ಷೇತ್ರದಲ್ಲಿನ ಸಂಜಯಕುಮಾರ ಬಿರಾದಾರ ಅವರ ಸಾಧನೆಯನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಕರ್ನಾಟಕ ರಾಜ್ಯದ ನಿವೃತ್ತ ನ್ಯಾಯಮೂರ್ತಿಗಳಾದ ಅರಳಿ ನಾಗರಾಜ, ಶಾಸಕರಾದ ಎ ಎಸ್ ನಡಹಳ್ಳಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಡಾ.ಎಸ್.ಬಾಲಾಜಿ, ಜಾವಿದ್ ಜಮಾದಾರ್ ಇನ್ನಿತರ ಪ್ರಶಸ್ತಿ ನೀಡಿ ಗೌರವಿಸಿದರು.


ನಿಮ್ಮ ಕಾಮೆಂಟ್ ಬರೆಯಿರಿ