ಭಾರತದ ಹೆಣ್ಣು ಮಕ್ಕಳ ಭವಿಷ್ಯ ಕಸಿಯಲಾಗುತ್ತಿದೆ: ಉಡುಪಿ ಹಿಜಾಬ್‌ ವಿವಾದದ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಕುರಿತು ಹೆಚ್ಚುತ್ತಿರುವ ವಿವಾದದ ನಡುವೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಷ್ಟ್ರವು ವಿದ್ಯಾರ್ಥಿನಿಯರ ಭವಿಷ್ಯವನ್ನು ಕಸಿದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳ ಹಿಜಾಬ್ ವಿವಾದ ಅವರ ಶಿಕ್ಷಣದ ಹಾದಿಯಲ್ಲಿ ಬರಲು ಬಿಡುವ ಮೂಲಕ ನಾವು ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ. ತಾಯಿ ಸರಸ್ವತಿಯು ಎಲ್ಲರಿಗೂ ಜ್ಞಾನವನ್ನು ನೀಡುತ್ತಾಳೆ. ಆಕೆ ಭಿನ್ನಾಭಿಪ್ರಾಯ ತೋರುವುದಿಲ್ಲ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಕರ್ನಾಟಕದ ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿವಾದ ನಡೆಯುತ್ತಿದೆ. ಕಾಲೇಜು ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನಿರಾಕರಿಸಿವೆ.ಉಡುಪಿಯ ಕಾಲೇಜೊಂದರಲ್ಲಿ ಆರಂಭವಾದ ಹಿಜಾಬ್ ವಿವಾದ ಈಗ ಜಿಲ್ಲೆಯ ಇತರ ಶಾಲೆಗಳಿಗೂ ವ್ಯಾಪಿಸಿದೆ. ಕುಂದಾಪುರದ ಸರ್ಕಾರಿ ಕಾಲೇಜು ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಕಾಲೇಜಿಗೆ ಬರದಂತೆ ಸೂಚನೆ ನೀಡಿದೆ.
ಮುಸ್ಲಿಮ್ ಹುಡುಗಿಯರ ಹಿಜಾಬ್‌ಗಳಿಗೆ ಪ್ರತಿಯಾಗಿ ಹಲವಾರು ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆ.

ಈ ವಿಚಾರ ದೊಡ್ಡ ವಿವಾದವಾಗಿ ಇತರ ಶಿಕ್ಷಣ ಸಂಸ್ಥೆಗಳಿಗೂ ವ್ಯಾಪಿಸಿದ್ದು, ಹೈಕೋರ್ಟ್ ಮೆಟ್ಟಿಲೇರಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹಾಗೂ ಸರ್ಕಾರದ ಉನ್ನತಾಧಿಕಾರಿಗಳೊಂದಿಗೆ ಸರ್ಕಾರದ ನಿಲುವಿನ ಕುರಿತು ಸಭೆ ನಡೆಸಿದರು. .
ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಓದುತ್ತಿರುವ ಐವರು ಬಾಲಕಿಯರು ಕಾಲೇಜಿನಲ್ಲಿ ಹಿಜಾಬ್ ನಿರ್ಬಂಧವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಫೆಬ್ರವರಿ 8 ರಂದು ವಿಚಾರಣೆ ನಡೆಸಲಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ...

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement