ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಪುನಃ ಗಂಭೀರ, ಮತ್ತೆ ವೆಂಟಿಲೇಟರ್‌ ಅಳವಡಿಕೆ: ವೈದ್ಯರು

ಮುಂಬೈ: ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಶನಿವಾರ ತಿಳಿಸಿದ್ದಾರೆ.
92 ವರ್ಷದ ಲತಾ ಮಂಗೇಶ್ಕರ್ ಸೌಮ್ಯ ರೋಗಲಕ್ಷಣಗಳೊಂದಿಗೆ ಕೋವಿಡ್‌‌ ಸೋಂಕಿಗೆ ಒಳಗಾದರು ಮತ್ತು ಜನವರಿ 8 ರಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ಅವರನ್ನು ದಾಖಲಿಸಲಾಯಿತು, ಅಲ್ಲಿ ಅವರು ಡಾ. ಪ್ರತೀತ್ ಸಮ್ದಾನಿ ಮತ್ತು ಅವರ ವೈದ್ಯರ ತಂಡದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ.ಮತ್ತೆ ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ” ಎಂದು ಸಮ್ದಾನಿ ತಿಳಿಸಿದ್ದಾರೆ.
ಜನವರಿ 29 ರಂದು, ಸಮ್ದಾನಿ ಅವರು ಮಂಗೇಶ್ಕರ್ ಸ್ವಲ್ಪ ಸುಧಾರಣೆಯ ಲಕ್ಷಣಗಳನ್ನು ತೋರಿಸುತ್ತಿದ್ದಾರೆ ಮತ್ತು ವೆಂಟಿಲೇಟರ್ನಿಂದ ಹೊರಬಂದಿದ್ದಾರೆ. ಆದರೆ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಹೇಳಿದ್ದರು.
ಭಾರತೀಯ ಚಿತ್ರರಂಗದ ಶ್ರೇಷ್ಠ ಹಿನ್ನೆಲೆ ಗಾಯಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಮಂಗೇಶ್ಕರ್ ಅವರು 1942 ರಲ್ಲಿ 13 ನೇ ವಯಸ್ಸಿನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು ವಿವಿಧ ಭಾರತೀಯ ಭಾಷೆಗಳಲ್ಲಿ 30,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.
ಭಾರತದ ಮೆಲೋಡಿ ಕ್ವೀನ್ ಎಂದು ಕರೆಯಲ್ಪಡುವ ಹಿನ್ನೆಲೆ ಗಾಯಕಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ, ಜೊತೆಗೆ ಪದ್ಮಭೂಷಣ, ಪದ್ಮವಿಭೂಷಣ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಪ್ರಮುಖ ಸುದ್ದಿ :-   ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement