ವಿಧಾನಸಭೆಗೆ ಹಿಜಾಬ್ ಧರಿಸಿಯೇ ಹೋಗ್ತೇನೆ, ಧೈರ್ಯವಿದ್ದರೆ ನನ್ನನ್ನು ತಡೆಯಲಿ: ಸರ್ಕಾರಕ್ಕೆ ಕಾಂಗ್ರೆಸ್ ಶಾಸಕಿ ಸವಾಲು

ಕಲಬುರಗಿ: ಹಿಜಾಬ್ ಧರಿಸುವುದು ಮುಸ್ಲಿಂ ಮಹಿಳೆಯರ ಸಂಪ್ರದಾಯ, ಅದು ನಮ್ಮ ಹಕ್ಕು. ವಿಧಾನಸೌಧದಲ್ಲಿ ಹಿಜಾಬ್ ಧರಿಸಿಯೇ ಕೂರುತ್ತೇನೆ, ಧೈರ್ಯವಿದ್ದರೆ ತಡೆಯಲಿ ಎಂದು ಕಲಬುರಗಿ ಉತ್ತರ ಮತಕ್ಷೇತ್ರದ ಕಾಂಗ್ರೆಸ್ ಶಾಸಕಿ ಖನೀಜಾ ಫಾತೀಮಾ ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಶನಿವಾರ ಹಿಜಾಬ್ ವಿರೋಧ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಹೋಗಿರುವುದಕ್ಕೆ ಅವರಿಗೆ ತರಗತಿಗೆ ಪ್ರವೇಶ ನಿರಾಕರಿಸಲಾಗಿದೆ. ಹಿಜಾಬ್ ಅನ್ನು ನಾವು ಮೊದಲಿನಿಂದಲೂ ಧರಿಸುತ್ತಿದ್ದೇವೆ. ನಾನು ಕೂಡ ವಿಧಾನಸಭೆಗೆ ಹಿಜಾಬ್ ಧರಿಸಿಯೇ ಹೋಗಿದ್ದೇನೆ. ಮುಂದೆಯೂ ಹಿಜಾಬ್ ಧರಿಸಿಯೇ ಹೋಗುತ್ತೇನೆ. ಧೈರ್ಯವಿದ್ದರೆ ನನ್ನನ್ನು ತಡೆಯಲಿ ಎಂದು ಸವಾಲು ಹಾಕಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಹೀಗಾಗಿ ಜನರನ್ನು ಬೇರೆಡೆ ಸೆಳೆಯಲು ಈ ರೀತಿಯ ವಿಚಾರಗಳನ್ನುಮುಂದೆ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದ ಅವರು ನಾನು ಉಡುಪಿಗೆ ಹೋಗಿ ವಿದ್ಯಾರ್ಥಿನಿಯರ ಹೋರಾಟಕ್ಕೆ ಬೆಂಬಲ ನೀಡುತ್ತೇನೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಪ್ರಮುಖ ಸುದ್ದಿ :-   41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

1 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement