ಬೆಂಗಳೂರು : ಮುಂಬೈನಲ್ಲಿ ಇಂದು, ಭಾನುವಾರ ನಿಧನರಾದ ಭಾರತ ರತ್ನ ಲತಾ ಮಂಗೇಶ್ಕರ್ ಅವರ ಗೌರವಾರ್ಥ ರಾಜ್ಯ ಸರ್ಕಾರ ಎರಡು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.
ಅವರ ನಿಧನಕ್ಕೆ ಸರ್ಕಾರ ತೀವ್ರ ದುಃಖ ವ್ಯಕ್ತಪಡಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅಗಲಿದ ಆತ್ಮದ ಗೌರವಾರ್ಥವಾಗಿ ಫೆಬ್ರವರಿ 6 ಮತ್ತು 7 ರಂದು ರಾಜ್ಯಾದ್ಯಂತ ಎರಡು ಶೋಕಾಚರಣೆ ನಡೆಯಲಿದೆ. ಈ ಅವಧಿಯಲ್ಲಿ ಯಾವುದೇ ಅಧಿಕೃತ, ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಭಾರತದ ತ್ರಿವರ್ಣ ಧ್ವಜ ಅರ್ಧಕ್ಕೆ ಹಾರಲಿದೆ,” ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಲತಾ ಮಂಗೇಶ್ಕರ್ ಅವರು 92 ನೇ ವಯಸ್ಸಿನಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿದ್ದಕ್ಕಾಗಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರು ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ.
ಈ ಜಗತ್ತಿನಲ್ಲಿ ಎಲ್ಲಿಯತನಕ ಸಂಗೀತ ಇರುತ್ತದೆಯೋ, ಎಲ್ಲಿಯವರೆಗೂ ಹಾಡುಗಾರಿಕೆ ಇರುತ್ತದೆಯೋ, ಅಲ್ಲಿಯವರೆಗೂ ಗಾನ ವಿದುಷಿ ಲತಾ ಮಂಗೇಶ್ಕರ್ ಅವರು ಪ್ರತಿಯೊಬ್ಬರ ಮನದಲ್ಲಿಯೂ ಚಿರಸ್ಥಾಯಿಯಾಗಿ ಉಳಿಯಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ