ಪಂಜಾಬ್ ಚುನಾವಣೆ: ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಚರಂಜಿತ್ ಸಿಂಗ್ ಚನ್ನಿ ಹೆಸರಿಸಿದ ರಾಹುಲ್ ಗಾಂಧಿ

ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಗೆ ಚರಣಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಘೋಷಿಸಿದ್ದಾರೆ.
ಲುಧಿಯಾನದಲ್ಲಿ ವರ್ಚುವಲ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ ಈ ಘೋಷಣೆ ಮಾಡಿದರು. ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಚರಣಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಗಾಂಧಿ ಹೇಳಿದ್ದಾರೆ.
ಕಳೆದ ವಾರ, ಕಾಂಗ್ರೆಸ್ ನಾಯಕ ಜಲಂಧರ್‌ನಲ್ಲಿ ವರ್ಚುವಲ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್‌ ಗಾಂಧಿ, ಫೆಬ್ರವರಿ 20ರ ಚುನಾವಣೆಗೆ ತನ್ನ ಪಕ್ಷವು ತನ್ನ ಮುಖ್ಯಮಂತ್ರಿಯ ಅಭ್ಯರ್ಥಿಯನ್ನು ಶೀಘ್ರದಲ್ಲೇ ಪ್ರಕಟಿಸಲಿದೆ ಎಂದು ಹೇಳಿದ್ದರು.
ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಈ ಹಿಂದೆ ಪಕ್ಷದ ಮುಖ್ಯಮಂತ್ರಿಯಾಗಿ ಯಾರನ್ನು ಆಯ್ಕೆ ಮಾಡಿದರೂ ಅವರು ಬೆಂಬಲಿಸುವುದಾಗಿ ಭರವಸೆ ನೀಡಿದ್ದರು.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಹಿರಿಯ ನಾಯಕ ಅಮರಿಂದರ್ ಸಿಂಗ್ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ನಂತರ ಚನ್ನಿ ಅವರನ್ನು ಪಂಜಾಬ್ ಮುಖ್ಯಮಂತ್ರಿಯಾಗಿ ನೇಮಿಸಲಾಯಿತು.
117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ಫೆಬ್ರವರಿ 20 ರಂದು ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಪ್ರಮುಖ ಸುದ್ದಿ :-   'ಐಸ್‌ಕ್ರೀಂ ಮ್ಯಾನ್‌' ಖ್ಯಾತಿಯ ನ್ಯಾಚುರಲ್ಸ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ ಕಾಮತ್ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement