ಲತಾ ದೀದಿ ಅಗಲಿಕೆ ದುಃಖ ಶಬ್ದಗಳಲ್ಲಿ ವಿವರಿಸಲಾಗದ್ದು; ಟ್ವೀಟ್​ ಮೂಲಕ ಭಾವಪೂರ್ಣ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಮುಂಬೈ: ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ (92 ವರ್ಷ)​ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸರಣಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಲತಾ ಮಂಗೇಶ್ಕರ್ ಕಳೆದ ಹಲವು ದಿನಗಳಿಂದ ಕೊವಿಡ್​ -19 ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದರು. ಅವರಿಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು, ಭಾನುವಾರ ಅವರು ನಿಧನರಾಗಿದ್ದಾರೆ.

ಪ್ರಧಾನಿ ಮೋದಿ ತಾವು ಲತಾ ಮಂಗೇಶ್ಕರ್ ಅವರೊಂದಿಗೆ ಇದ್ದ ಸಂದರ್ಭದ ಎರಡು ಫೋಟೋಗಳನ್ನು ಪ್ರಧಾನಿ ಮೋದಿ ಶೇರ್​ ಮಾಡಿ ಸಂತಾಪ ಸೂಚಿಸಿದ್ದಾರೆ.

ಮೊದಲ ಟ್ವೀಟ್​​ನಲ್ಲಿ ತಾವು ಲತಾ ಮಂಗೇಶ್ವರ್​ರಿಗೆ ಸನ್ಮಾನಿಸಿದ ಫೋಟೋವೊಂದನ್ನು ಶೇರ್ ಮಾಡಿಕೊಂಡಿರುವ ಪ್ರಧಾನಿ ಮೋದಿ, ದಯೆ ಮತ್ತು ಕಾಳಜಿಯ ಪ್ರತಿರೂಪದಂತಿದ್ದ ಲತಾ ದೀದಿಯನ್ನು ಕಳೆದುಕೊಂಡ ದುಃಖವನ್ನು ನನಗೆ ಶಬ್ದಗಳಲ್ಲಿ ವಿವರಿಸಲು ಸಾಧ್ಯವಾಗುತ್ತಿಲ್ಲ. ಅವರ ಅಗಲಿಕೆಯಿಂದ ಉಂಟಾದ ಶೂನ್ಯವನ್ನು ತುಂಬಲು ಸಾಧ್ಯವಿಲ್ಲ. ಅವರ ಮಧುರ ಧ್ವನಿಗೆ ಜನರನ್ನು ಮಂತ್ರಮುಗ್ಧರನ್ನಾಗಿಸುವ ಅಪ್ರತಿಮ ಶಕ್ತಿಯಿತ್ತು. ಲತಾ ಮಂಗೇಶ್ಕರ್ ಅವರು ಭಾರತೀಯ ಸಂಸ್ಕೃತಿಯ ಬಲಾಢ್ಯ ಪ್ರತಿನಿಧಿಯಾಗಿದ್ದರು. ಮುಂದಿನ ಪೀಳಿಗೆಯ ನೆನಪಲ್ಲಿ ಅವರು ಸದಾ ಇರುತ್ತಾರೆ ಎಂದು ಬರೆದಿದ್ದಾರೆ.

ಪ್ರಮುಖ ಸುದ್ದಿ :-   ನಟಿ ಅಮೃತಾ ಪಾಂಡೆ ಶವವಾಗಿ ಪತ್ತೆ

ಅವರು ಮಾಡಿದ ಮತ್ತೊಂದು ಟ್ವೀಟ್‌ನಲ್ಲಿ ಪ್ರಧಾನಿ ಮೋದಿ, ಭಾರತೀಯ ಚಿತ್ರರಂಗದಲ್ಲಿ ದಶಕಗಳಿಂದ ಆದ ಪರಿವರ್ತನೆಯನ್ನು ಲತಾ ಮಂಗೇಶ್ಕರ್​ ತುಂಬ ಹತ್ತಿರದಿಂದ ನೋಡಿದವರು. ಸಿನಿಮಾ ಕ್ಷೇತ್ರದಿಂದ ಬಲಿಷ್ಠ, ಅಭಿವೃದ್ಧಿ ಹೊಂದಿದ ಭಾರತವನ್ನು ನೋಡುವುದು ಅವರ ಅತಿದೊಡ್ಡ ಬಯಕೆಯಾಗಿತ್ತು ಎಂದು ಬರೆದಿದ್ದಾರೆ.
ಲತಾ ದೀದಿಯವರಿಂದ ನಾನು ಅಪಾರ ಪ್ರೀತಿ ಪಡೆದಿದ್ದೇನೆ. ಅವರ ಪ್ರೀತಿಪಾತ್ರರಲ್ಲಿ ನಾನೂ ಒಬ್ಬನಾಗಿದ್ದು ಬಹುದೊಡ್ಡ ಗೌರವ ಎಂದು ಭಾವಿಸುತ್ತೇನೆ. ನಾನು ಅವರೊಂದಿಗೆ ಕಳೆದ ಕ್ಷಣಗಳು, ಮಾತುಕತೆಗಳನ್ನೆಂದಿಗೂ ಮರೆಯಲು ಸಾಧ್ಯವಿಲ್ಲ. ಲತಾ ದೀದಿ ನಿಧನಕ್ಕೆ ನನ್ನ ಸಂತಾಪಗಳು. ಅವರ ಕುಟುಂದೊಟ್ಟಿಗೆ ಮಾತನಾಡಿ ಸಾಂತ್ವನ ಹೇಳಿದ್ದೇನೆ ಎಂದೂ ಪ್ರಧಾನಿ ಬರೆದಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ....| ವಿಚ್ಛೇದನ ಪಡೆದ ಮಗಳನ್ನು ವಾದ್ಯಗಳ ಸಮೇತ ಮನೆಗೆ ಕರೆತಂದ ತಂದೆ...!

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement