ಮರಕ್ಕೆ ಕಾರು ಡಿಕ್ಕಿ: ಐದು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರದಲ್ಲಿ ನಡೆದ ಭೀಕರ ಅಪಘಾತದಲ್ಲಿ ಐದು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಮೃತರನ್ನು ಗೀತಾ (32 ವರ್ಷ), ಶಾರದಾ (60 ವರ್ಷ) ಮತ್ತು ಬಾಲಕಿ ಧೃತಿ (5 ವರ್ಷ) ಎಂದು ಗುರುತಿಸಲಾಗಿದ್ದು ಇವರು ಉಡುಪಿ ಜಿಲ್ಲೆ ಕುಂದಾಪುರದವರು ಎನ್ನಲಾಗಿದೆ. ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಕಾರಿನಲ್ಲಿದ್ದ ಸುಧೀಂದ್ರ (35 ವರ್ಷ), ನಾಗೇಶ (65 ವರ್ಷ), ದಯಾನಂದ (66 ವರ್ಷ), ಎಂಬವರು ಸಹ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಇಂದು ಸಿಎಂ ಆಗಿ ಡಿಕೆ ಶಿವಕುಮಾರ ಪ್ರಮಾಣ ವಚನ: ಪರಮೇಶ್ವರ ಡಿಸಿಎಂ ; 13 ಶಾಸಕರಿಗೆ ಸಚಿವ ಸ್ಥಾನ ; ಪಟ್ಟಿ ಇಲ್ಲಿದೆ

ನಿಮ್ಮ ಕಾಮೆಂಟ್ ಬರೆಯಿರಿ

advertisement