ಜೆಎನ್‌ಯು ವಿವಿಗೆ ಮೊದಲ ಮಹಿಳಾ ಉಪಕುಲಪತಿಯಾಗಿ ಶಾಂತಿಶ್ರೀ ಪಂಡಿತ ನೇಮಕ

ನವದೆಹಲಿ:ದೆಹಲಿಯ ಪ್ರತಿಷ್ಠಿತ ಜವಾಹರಲಾಲ ನೆಹರು ವಿಶ್ವವಿದ್ಯಾನಿಲಯದ ಮೊದಲ ಮಹಿಳಾ ಉಪಕುಲಪತಿಯಾಗಿ ಶಾಂತಿಶ್ರೀ ಧೂಳಿಪುಡಿ ಪಂಡಿತ ಅವರು ನೇಮಕವಾಗಿದ್ದಾರೆ.
ಇಂದು, ಸೋಮವಾರ ಶಿಕ್ಷಣ ಸಚಿವಾಲಯ ಶಾಂತಿಶ್ರೀ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. ಪ್ರಸ್ತುತ ಶಾಂತಿಶ್ರೀ ಪಂಡಿತ ಪ್ರಸ್ತುತ ಮಹಾರಾಷ್ಟ್ರದ ಸಾವಿತ್ರಿಬಾಯಿ ಫುಲೆ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದಾರೆ. 59 ವರ್ಷ ವಯಸ್ಸಿನ ಅವರು ಜೆಎನ್‍ಯು ಹಳೆಯ ವಿದ್ಯಾರ್ಥಿಯಾಗಿದ್ದಾರೆ, ಅಲ್ಲಿ ಅವರು ಅಂತಾರಾಷ್ಟ್ರೀಯ ಸಂಬಂಧ ವಿಷಯದಲ್ಲಿ ತಮ್ಮ ಎಂಫಿಲ್ ಮತ್ತು ಪಿಎಚ್‌ಡಿ ಪಡೆದಿದ್ದಾರೆ. 1988ರಲ್ಲಿ ಗೋವಾ ವಿಶ್ವವಿದ್ಯಾನಿಲಯದಿಂದ ತಮ್ಮ ಬೋಧನಾ ವೃತ್ತಿಯನ್ನು ಪ್ರಾರಂಭಿಸಿದರು ಮತ್ತು 1993 ರಲ್ಲಿ ಪುಣೆ ವಿಶ್ವವಿದ್ಯಾಲಯಕ್ಕೆ ತೆರಳಿದರು. ಅವರು ವಿವಿಧ ಶೈಕ್ಷಣಿಕ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಸ್ಥಾನವನ್ನು ಹೊಂದಿದ್ದಾರೆ. ಅವರು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ , ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಮಂಡಳಿ ಮತ್ತು ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಸಂದರ್ಶಕರ ನಾಮನಿರ್ದೇಶಿತ ಸದಸ್ಯರಾಗಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶಾಂತಿಶ್ರೀ ಧೂಳಿಪುಡಿ ಪಂಡಿತ ಅವರನ್ನು ಉಪಕುಲಪತಿಯಾಗಿ ನೇಮಕ ಮಾಡಿದ್ದನ್ನು ಅನುಮೋದಿಸಿದ್ದಾರೆ. ಅಧಿಕಾರ ಐದು ವರ್ಷಗಳ ಅವಧಿಗೆ ಇರುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅವರ ವೃತ್ತಿ ಜೀವನದಲ್ಲಿ ಅವರು 29 ಪಿಎಚ್‌ಡಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ಹಂಗಾಮಿ ಉಪಕುಲಪತಿಯಾಗಿ ಉಸ್ತುವಾರಿ ವಹಿಸಿದ್ದ ಜಗದೇಶ್ ಕುಮಾರ್ ಅವರನ್ನು ಕಳೆದ ವಾರ ಯುಜಿಸಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಮೂರನೇ ಹಂತದಲ್ಲಿ ಅಂದಾಜು 64.4%ರಷ್ಟು ಮತದಾನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement