ಹಿಜಾಬ್‍ಗೆ ಅನುಮತಿ ನೀಡಲು ಒತ್ತಾಯಿಸಿ ಈಗ ನೀಲಿ ಶಾಲು ಧರಿಸಿ ಪ್ರತಿಭಟನೆ

ಚಿಕ್ಕಮಗಳೂರು: ಹಿಜಾಬ್ ವಿವಾದ ದಿನೇ ದಿನೇ ತೀವ್ರಗೊಳ್ಳುತ್ತಿದ್ದು, ಇದರ ಬೆನ್ನಲ್ಲೇ ನೀಲಿ ಶಾಲು ಧರಿಸಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಚಿಕ್ಕಮಗಳೂರು ಐಡಿಎಸ್‍ಜಿ ಕಾಲೇಜಿನ ಕೆಲ ವಿದ್ಯಾರ್ಥಿಗಳು ಪ್ರತಿಭಟನೆ ಹಿಜಾಬ್ ತೆಗೆಸಬಾರದು ಎಂದು ಆಗ್ರಹಿಸಿ ನೀಲಿ ಶಾಲು ಧರಿಸಿ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸಿರುವ ವಿದ್ಯಾರ್ಥಿಗಳು ಸಹ ಘೋಷಣೆ ಮಾಡಿದರು.
ಚಿಕ್ಕಮಗಳೂರು ನಗರದಲ್ಲಿ ಹಿಜಾಬ್‌ಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆದಿದೆ. ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ಬಳಿ ನಡೆದ ಪ್ರತಿಭಟನೆಯಲ್ಲಿ ಬುರ್ಖಾ, ಹಿಜಾಬ್ ಧರಿಸಿದ ಮಹಿಳೆಯರು, ವಿದ್ಯಾರ್ಥಿನಿಯರು ಭಾಗಿಯಾಗಿದ್ದರು. ಸಮಾನ ಮನಸ್ಕರ ಮಹಿಳಾ ಒಕ್ಕೂಟದಿಂದ ಈ ಪ್ರತಿಭಟನೆ ನಡೆದಿದೆ.
ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ದಿನ ಶಾಲೆಗಳಲ್ಲಿ ಮಾತ್ರವಿದ್ದ ವಸ್ತ್ರಸಂಹಿತೆಯನ್ನು ಪದವಿಪೂರ್ವ ಕಾಲೇಜುಗಳಿಗೂ ಸರ್ಕಾರ ವಿಸ್ತರಿಸಿ ಆದೇಶಿಸಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement