ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೀಶ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ತನಿಖೆಗೆ ಸರ್ಕಾರ ಶಿಫಾರಸು ಮಾಡಿದ್ದನ್ನು ಪ್ರಶ್ನಿಸಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಮೇಲ್ಮನವಿಯನ್ನು ಸುಪ್ರಿಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ರಾಜ್ಯ ಸರ್ಕಾರ 2019 ರಲ್ಲಿ ಈ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಿತ್ತು. ಈ ಕುರಿತು ಈಗಾಗಲೇ ವಿನಯ್ ಕುಲಕರ್ಣಿ ಅವರು ರಾಜ್ಯ ಹೈಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದರು, ಆದರೆ ಹೈಕೋರ್ಟ್ ಅವರ ಮನವಿ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ವಿನಯ್ ಸುಪ್ರಿಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈಗ ಸುಪ್ರೀಂಕೋರ್ಟಿನಲ್ಲಿಯೂ ವಿನಯ್ ಕುಲಕರ್ಣಿ ಮನವಿ ತಿರಸ್ಕೃತಗೊಂಡಿದೆ.
ಈಗಾಗಲೇ ವಿನಯ್ ಕುಲಕರ್ಣಿ ಅವರು ಒಂಭತ್ತು ತಿಂಗಳುಗಳ ಕಾಲ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದು, ಸದ್ಯಕ್ಕೆ ಧಾರವಾಡ ಜಿಲ್ಲೆ ಪ್ರವೇಶಿಸದೇ ಇರುವುದು ಸೇರಿದಂತೆ ಹಲವು ಷರತ್ತು ವಿಧಿಸಿ ಜಾಮೀನಿನ ಮೇಲೆ ಹೊರಗಿದ್ದಾರೆ. ಸುಪ್ರಿಂ ಕೋರ್ಟ್ನಲ್ಲಿ ವಿನಯ್ಗೆ ಹಿನ್ನೆಡೆಯಾದಂತಾಗಿದ್ದು, ಮತ್ತೆ ಸಂಕಷ್ಟ ಎದುರಾದಂತಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ