ಕರ್ನಾಟಕದ ಮೊದಲ ಮಹಿಳಾ ಕನ್ನಡ ಶಾಲೆ ರಾತ್ರೋರಾತ್ರಿ ನೆಲಸಮ

ಮೈಸೂರು: ಕರ್ನಾಟಕ ಮೊದಲ ಮಹಿಳಾ ಕನ್ನಡ ಶಾಲೆ ಎನ್‍ಟಿಎಂಎಸ್ ಶಾಲೆಯ ಕಟ್ಟಡ ರಾತ್ರೋರಾತ್ರಿ ನೆಲಸಮಗೊಂಡಿಗದೆ. ಈ ಮೂಲಕ ಕರ್ನಾಟಕ ಮೊದಲ ಮಹಿಳಾ ಕನ್ನಡ ಶಾಲೆ ಈಗ ಇತಿಹಾಸ ಪುಟ ಸೇರಿದೆ.
ಕಳೆದ 15 ವರ್ಷಗಳಿಂದ ಮೈಸೂರಿನಲ್ಲಿ ವಿವೇಕ ಸ್ಮಾರಕ ನಿರ್ಮಾಣದ ವಿಚಾರದಲ್ಲಿ ಇದು ವಿವಾದಿತ ಪ್ರದೇಶವಾಗಿತ್ತು. ರಾಜ್ಯ ಸರ್ಕಾರ ಶಾಲೆಯ ಜಾಗವನ್ನು ವಿವೇಕ ಸ್ಮಾರಕ ನಿರ್ಮಾಣಕ್ಕಾಗಿ ರಾಮಕೃಷ್ಣ ಆಶ್ರಮಕ್ಕೆ ಹಸ್ತಾಂತರ ಮಾಡಿತ್ತು. ಇದನ್ನು ಕೆಲ ಸಂಘಟನೆಗಳು ಪ್ರಶ್ನಿಸಿ ಹೈಕೋರ್ಟ್‍ಗೆ ಮೊದ್ದಮೆ ಹೂಡಿದ್ದವು. ಹೈಕೋರ್ಟ್‍ನಲ್ಲಿ ರಾಮಕೃಷ್ಣ ಆಶ್ರಮದ ಪರವಾಗಿ ತೀರ್ಪು ಬಂದಿತ್ತು. ಜಿಲ್ಲಾಧಿಕಾರಿಗಳು ಜಾಗವನ್ನು ರಾಮಕೃಷ್ಣಾಶ್ರಮಕ್ಕೆ ಹಸ್ತಾಂತರಿಸಿದ್ದರು.
ನಿನ್ನೆ ಇಡೀ ರಾತ್ರಿ ಡಿಸಿಪಿ ಗೀತಾ ಪ್ರಸನ್ನ, ಎಸಿಪಿ ಶಶಿಧರ್, 5 ಸರ್ಕಲ್ ಇನ್ಸ್ ಪೆಕ್ಟರ್ ಸೇರಿ ಸುಮಾರು 250ಕ್ಕೂ ಹೆಚ್ಚು ಪೊಲೀಸ್ ಭದ್ರತೆಯಲ್ಲಿ ಶಾಲಾ ಕಟ್ಟಡ ತೆರವು ಕಾರ್ಯಾಚರಣೆ ನಡೆದಿದೆ. ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಕಟ್ಟಡವನ್ನು 4 ಹಿಟಾಚಿ, 3 ಜೆಸಿಬಿಗಳಿಂದ ಕಟ್ಟಡ ತೆರವುಗೊಳಿಸಲಾಗಿದೆ. ಕಾರ್ಯಾಚರಣೆ ತಡೆಯಲು ಬಂದ ಎನ್‍ಟಿಎಂ ಶಾಲೆ ಉಳಿಸಿ ಹೋರಾಟ ಸಮಿತಿ ಸದಸ್ಯರನ್ನು ಬಂಧಿಸಲಾಗಿದೆ. ವಿವೇಕಾನಂದರ 150ನೇ ಜಯಂತಿ ಹಿನ್ನೆಲೆಯಲ್ಲಿ ಅದರ ಸವಿ ನೆನಪಿಗಾಗಿ ಈ ಜಾಗದಲ್ಲಿ ಸ್ಮಾರಕ ನಿರ್ಮಾಣವಾಗಲಿದೆ.

ಪ್ರಮುಖ ಸುದ್ದಿ :-   ಸಿದ್ದರಾಮಯ್ಯ ವಿರುದ್ಧದ ನಕಲಿ ಸ್ಟಿಂಗ್‌ ಆಪರೇಷನ್‌ ಪ್ರಕರಣ: ದೆಹಲಿಯ ವ್ಯಕ್ತಿಯ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement