ದಾಂಡೇಲಿ: ಕಾಳಿ ನದಿಗೆ ಕೈ ತೊಳೆಯಲು ಹೋದಾಗ ಯುವಕನನ್ನು ಎಳೆದೊಯ್ದ ಮೊಸಳೆ..!

ಕಾರವಾರ: ಜಿಲ್ಲೆಯ ದಾಂಡೇಲಿಯ ಕಾಳಿ ನದಿಯಲ್ಲಿ ಯುವಕನೊಬ್ಬನನ್ನು ಮೊಸಳೆ ಎಳೆದೊಯ್ದ ಘಟನೆ ನಡೆದಿದೆ.

ಕಾಳಿ ನದಿಯಲ್ಲಿ ಕೈ ತೊಳೆಯಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ಮೃತನನ್ನು ಅರ್ಷದ್ ಖಾನ್ (22) ಎಂದು ಗುರುತಿಸಲಾಗಿದೆ. ಈತದಾಂಡೇಲಿಯ ಪಟೇಲ್ ನಗರದ ನಿವಾಸಿಯಾಗಿದ್ದಾನೆ ಎಂದು ಹೇಳಲಾಗಿದೆ.

ಈತ ದಿನನಿತ್ಯದ ಕೆಲಸ ಮುಗಿಸಿ ಕೈ ಕಾಲು ತೊಳೆಯಲು ಕಾಳಿ ನದಿ ದಡಕ್ಕೆ ಹೋಗಿದ್ದ. ಈ ವೇಳೆ ನೀರಿಗೆ ಕೈ ಹಾಕುತ್ತಿದ್ದಂತೆ ಮೊಸಳೆ ಎಳೆದೊಯ್ದಿದೆ. ಏಕಾಏಕಿ ದಾಳಿ ಮಾಡಿದ ಮೊಸಳೆ ಕ್ಷಣಾರ್ಧದಲ್ಲಿ ಎಳೆದುಕೊಂಡು ಹೋಗಿದೆ ಎಂದು ನೋಡಿದವರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಅರಣ್ಯಾಧಿಕಾರಿಗಳು ಮತ್ತು ಅಗ್ನಿಶಾಮಕ ದಳದಿಂದ ಯುವಕನ ದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದು, ದಾಂಡೇಲಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಳೆದ ಅಕ್ಟೋಬರ್‌ನಲ್ಲಿ ಮೀನು ಹಿಡಿಯುತ್ತಿದ್ದ ಬಾಲಕನನ್ನು ಮೊಸಳೆಯೊಂದು ಎಳೆದುಕೊಂಡು ಹೋಗಿತ್ತು.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement