ಬನಹಟ್ಟಿ :ಹಿಜಾಬ್ ವಿವಾದ, ಕಲ್ಲುತೂರಾಟ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಕುರಿತು ಎರಡು ವಿದ್ಯಾರ್ಥಿಗಳ ಗುಂಪಿನ ನಡುವೆ ವಿವಾದ ಉಂಟಾಗಿದ್ದು, ಇದು ವಿಕೋಪಕ್ಕೆ ಹೋಗಿ ಕಾಲೇಜು ಎದುರಿಗೆ ಕಲ್ಲು ತೂರಾಟ ನಡೆದ ಬಗ್ಗೆ ವರದಿಯಾಗಿದೆ.
ಹೀಗಾಗಿ ಕಾಲೇಜಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳನ್ನು ಮನೆಗೆ ಕಳಿಸಲು ಪ್ರಾಧ್ಯಾಪಕರು ಹರಸಾಹಸ ಪಡುತ್ತಿದ್ದು, ಶಾಲೆ ಹತ್ತಿರ ಜಮಾವಣೆಗೊಂಡ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಬಿಗುವಿನ ವಾತಾವರಣ ಉಂಟಾಗಿದೆ.
ಹಿಜಾಬ್ ಧರಿಸಿದ ವಿದ್ಯಾಥಿ೯ನಿಯರನ್ನು ಗೇಟ್ ಮುಂದೆ ಪೊಲೀಸರು ತಡೆದಿದ್ದು, ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಜಮಖಂಡಿ ಕುಡಚಿ ರಾಜ್ಯ ಹೆದ್ದಾರಿ ಬಂದ್ ಆಗಿದ್ದು, ಸ್ಥಳಕ್ಕೆ ಜಮಖಂಡಿ ಉಪವಿಭಾಗಾಧಿಕಾರಿ ಸಿದ್ದು ಹುಲ್ಲೋಳಿ, ಡಿವೈಎಸ್ಪಿ ಎಮ್ ಪಾಂಡುರಂಗಯ್ಯ, ಸಿಪಿಐ ಜೆ. ಕರುಣೇಶಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement