ಸರ್ಕಾರಿ ನೌಕರರು ಇನ್ಮುಂದೆ ಕಚೇರಿಯಿಂದ ಹೊರಡುವಾಗ ತಮ್ಮ ಬಳಿ ಇರುವ ನಗದನ್ನು ಘೋಷಿಸಬೇಕು: ಸರ್ಕಾರದ ಸುತ್ತೋಲೆ

ಬೆಂಗಳೂರು: ರಾಜ್ಯ ಸರಕಾರದ ಎಲ್ಲ ಇಲಾಖೆಗಳಲ್ಲಿ ಇನ್ನು ಮುಂದೆ ನಗದು ನಿರ್ವಹಣೆ ವಹಿ ಘೋಷಿಸುವಂತೆ ಸೂಚಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ನವೆಂಬರ್ 10ರಂದು ಹೈಕೋರ್ಟ್ ನೀಡಿದ ಸೂಚನೆ ಅನ್ವಯ ಈ ಆದೇಶ ಹೊರಡಿಸಲಾಗಿದ್ದು, ಇನ್ನು ಮುಂದೆ ಸರ್ಕಾರಿ ಇಲಾಖೆಯ ಎಲ್ಲ ನೌಕರರು ತಾವು ಕಚೇರಿಗೆ ಆಗಮಿಸಿದಾಗ ಹಾಗೂ ಹೊರಡುವಾಗ ತಮ್ಮ ಬಳಿ ಇರುವ ನಗದನ್ನು ಘೋಷಿಸುವಂತೆ ಸೂಚನೆ ನೀಡಲಾಗಿದೆ.

ಈ ನಿಯಮದ ಪ್ರಕಾರ ಪ್ರತಿಯೊಬ್ಬ ನೌಕರನೂ ಕೆಲಸದ ಆರಂಭದಲ್ಲಿ ನಗದು ಘೋಷಣೆ ವಹಿಯನ್ನು ತೆರೆಯಬೇಕು ಮತ್ತು ಹಾಜರಿ ಪುಸ್ತಕ ಅಥವಾ ಎಎಂಎಸ್ ನಲ್ಲಿ ಸಹಿ ಮಾಡಿದ ತಕ್ಷಣ ಈ ಘೋಷಣೆಯಾಗಬೇಕು.
ಆಡಳಿತದಲ್ಲಿ ಪಾರದರ್ಶಕತೆಯನ್ನು ತರುವುದಕ್ಕಾಗಿ ಈ ನಿಯಮವನ್ನು ಜಾರಿಗೆ ತರಲಾಗುತ್ತಿದ್ದು, ಇದರಿಂದ ಕಚೇರಿ ಅವಧಿಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಮಾಡಬಹುದು ಎಂದು ಸರ್ಕಾರ ಭಾವಿಸಿದೆ.
ನಗದು ಘೋಷಣೆ ವಹಿ ಸಂಬಂಧಪಟ್ಟ ವಿಭಾಗ ಅಥವಾ ಶಾಖೆಯ ಗ್ರೂಪ್ ಬಿ ದರ್ಜೆಯ ಅಧಿಕಾರಿಯ ವಶದಲ್ಲಿರಬೇಕು. ಈ ಅಧಿಕಾರಿ ನಮೂದು ಮಾಡಿದ ಮೊತ್ತದ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಅಧಿಕಾರವನ್ನು ಹೊಂದಿರುತ್ತಾನೆ. ಘೋಷಣೆ ಮಾಡಿದ್ದಕ್ಕಿಂತ ಹೆಚ್ಚಿನ ಮೊತ್ತವನ್ನು ಹೊಂದಿದ್ದರೆ ಅದನ್ನು ಅಕ್ರಮ ಸಂಪಾದನೆ ಎಂದು ಪರಿಗಣಿಸಲಾಗುತ್ತದೆ. ಆಗ ಅದನ್ನು ಸಕ್ರಮ ಹಣ ಎಂದು ಸಾಬೀತುಪಡಿಸುವುದು ಆರೋಪಿತ ನೌಕರನ ಜವಾಬ್ದಾರಿ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement