ಹಿಜಾಬ್‌ ವಿವಾದ ತೀವ್ರ: ರಾಜ್ಯಾದ್ಯಂತ ನಾಳೆಯಿಂದ ಹೈಸ್ಕೂಲ್‌ -ಕಾಲೇಜುಗಳಿಗೆ 3 ದಿನ ರಜೆ ಘೋಷಣೆ

ಬೆಂಗಳೂರು: ನಾಳೆಯಿಂದ ಮೂರು ದಿನ ಹೈಸ್ಕೂಲ್‌, ಪದವಿ ಪೂರ್ವ, ಪದವಿ, ಎಂಜಿನಿಯರ್‌ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಫೆಬ್ರವರಿ 9, 10 ಮತ್ತು 11ರ ವರೆಗೆ ಮೂರು ದಿನ 9, 10ನೇ ತರಗತಿಯ ಪ್ರೌಢ ಶಾಲೆಗಳು ( High School ) ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( PU College ) ನಾಳೆಯಿಂದ 3 ದಿನ ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಆದೇಶಿಸಿದೆ. ಅಲ್ಲದೇ ಪಿಯು ಕಾಲೇಜು, ಪದವಿ ಕಾಲೇಜು, ಪಿಜಿ, ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ.

ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜು, ಡಿಪ್ಲೋಮಾ ಕಾಲೇಜುಗಳ ವಿದ್ಯಾರ್ಥಿಗಳಿಗೆ  ರಜೆ ( Holiday Declared  ) ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ.
ನಾಳೆಯಿಂದ ಇಡೀ ರಾಜ್ಯಾದ್ಯಂತ ಖಾಸಗಿ ಹಾಗೂ ಸರ್ಕಾರಿ ಶಾಲಾ ಕಾಲೇಜುಗಳಿಗೆ ಮೂರು ದಿನಗಳ ರಜೆ ಘೋಷಣೆ ಮಾಡಲಾಗಿದೆ. 3 ದಿನಗಳ ಕಾಲ ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸೇರಿ ರಾಜ್ಯದ ಸಮಸ್ತ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ನ್ಯಾಯಾಲಯದಲ್ಲಿ ಈ ಪ್ರಕರಣ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳು ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್‌ ನಾರಾಯಣ ಮನವಿ ಮಾಡಿದ್ದಾರೆ.

1 ರಿಂದ 7ನೇ ತರಗತಿವರೆಗೆ ಶಾಲೆ ಎಂದಿನಂತೆ ತರಗತಿ:
ನಾಳೆಯಿಂದ 3 ದಿನ ಪ್ರೌಢಶಾಲೆ-ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ. ಆದರೆ 1 ರಿಂದ 7ನೇ ತರಗತಿವರೆಗೆ ಶಾಲೆ ಎಂದಿನಂತೆ ತರಗತಿ ನಡೆಯಲಿವೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement