ಫೆಬ್ರವರಿ 14ರಿಂದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಅಣ್ಣಾ ಹಜಾರೆ ಅನಿರ್ದಿಷ್ಟಾವಧಿ ಉಪವಾಸ

ನವದೆಹಲಿ: ಮಹಾರಾಷ್ಟ್ರ ಸರ್ಕಾರವು ಸೂಪರ್ ಮಾರ್ಕೆಟ್, ದಿನಸಿ‌ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡಿದ್ದನ್ನು ವಿರೋಧಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ (Anna Hazare) ಫೆಬ್ರವರಿ 14ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ.
. ಈ ಕುರಿತು ಈ ಹಿಂದೆ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದ ಅಣ್ಣಾ ಹಜಾರೆ ಈಗ ಮಾಲ್​ಗಳಲ್ಲಿ ವೈನ್ ಮಾರಾಟದ ನೀತಿಯನ್ನು ವಿರೋಧಿಸಿ ಅನಿರ್ದಿಷ್ಟಾವಧಿ ಉಪವಾಸ ನಡೆಸಲು ನಿರ್ಧಾರ ಮಾಡಿದ್ದಾರೆ.
ಕಳೆದ ವಾರ ಮಹಾರಾಷ್ಟ್ರ ಸರ್ಕಾರವು ರೈತರಿಗೆ ಹೆಚ್ಚುವರಿ ಆದಾಯವನ್ನು ಒದಗಿಸುವ ಹಣ್ಣು ಆಧಾರಿತ ವೈನ್‌ಗಳಿಗೆ ಉತ್ತೇಜನ ನೀಡಲು ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಸ್ಟೋರ್‌ಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡಲು ನಿರ್ಧರಿಸಿದೆ ಎಂದು ಘೋಷಿಸಿತ್ತು.
ಮಹಾರಾಷ್ಟ್ರದಾದ್ಯಂತ ಕಾರ್ಮಿಕರು ಮತ್ತು ಜನರ ಭಾವನೆಗಳನ್ನು ಪರಿಗಣಿಸಿ ವೈನ್ ಮಾರಾಟ ಮಾಡುವ ನಿರ್ಧಾರವನ್ನು ಮಹಾರಾಷ್ಟ್ರ ಸರ್ಕಾರ ಹಿಂಪಡೆಯದಿದ್ದರೆ ಆಂದೋಲನ ನಡೆಸಬೇಕಾಗುತ್ತದೆ. ಫೆ.14ರಿಂದ ರಾಲೇಗಾನ್ ಸಿದ್ಧಿಯಲ್ಲಿರುವ ಯಾದವಬಾಬಾ ದೇವಸ್ಥಾನದ ಬಳಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಿದ್ದೇನೆ ಎಂದು ಅವರು ಮಹಾರಾಷ್ಟ್ರದ ಸರ್ಕಾರಕ್ಕೆ ಪತ್ರದಲ್ಲಿ ತಿಳಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗಳಿಗೆ ಈಗಾಗಲೇ ಎರಡು ‘ಜ್ಞಾಪನಾ ಪತ್ರ’ಗಳನ್ನು ಕಳುಹಿಸಿದ್ದು ಇನ್ನೂ ಉತ್ತರ ಬಂದಿಲ್ಲ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ. ಮಹಾರಾಷ್ಟ್ರದ ವಿವಿಧ ಸಾಮಾಜಿಕ ಸಂಘಟನೆಗಳ ಸಮಾನ ಮನಸ್ಕ ಕಾರ್ಯಕರ್ತರ ಸಭೆಯನ್ನು ಶೀಘ್ರದಲ್ಲೇ ರಾಲೇಗಾನ್ ಸಿದ್ಧಿಯಲ್ಲಿ ನಡೆಸಲಾಗುವುದು ಎಂದೂ ಹಜಾರೆ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : "ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement