ಬನಹಟ್ಟಿ: ಶಿಕ್ಷಕರ ಮೇಲೆ ಹಲ್ಲೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಬಂದ್

ಬಾಗಲಕೋಟೆ : ಹಿಜಾಬ್-ಕೇಸರಿ ವಿವಾದ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಹಿಜಾಬ್ ವಿವಾದದ ಹಿನ್ನೆಲೆ ಬಾಗಲಕೋಟೆಯ ಬನಹಟ್ಟಿ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂಪರ ಸಂಘಟನೆಗಳು ಬನಹಟ್ಟಿ ಬಂದ್‌ಗೆ ಕರೆ ನೀಡಿವೆ. ಬಂದ್‌ ಹಿನ್ನೆಲೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ನೂರಾರು ಜನರು ಆಗಮಿಸಿದ್ದಾರೆ.
ಪ್ರತಿಭಟನೆ ವೇಳೆ ಮಂಗಳವಾರ ಶಿಕ್ಷಕರೊಬ್ಬರ ಮೇಲೆ ಹಲ್ಲೆ ನಡೆದಿತ್ತು. ಈ ಹಿನ್ನೆಲೆ ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಇಂದು ಬನಹಟ್ಟಿ ಬಂದ್ಗೆ ಕರೆ ನೀಡಲಾಗಿದೆ. ಪ್ರತಿಭಟನೆಗೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಆಗಮಿಸಿದ್ದಾರೆ.
ಬನಹಟ್ಟಿ ಪೊಲೀಸ್ ಠಾಣೆಯಿಂದ ತಹಶೀಲ್ದಾರ ಕಚೇರಿವರೆಗೆ ಮಾತ್ರ ಪ್ರತಿಭಟನೆ ನಡೆಸಲು ಅನುಮತಿಸಿದ್ದರಿಂದ ಬನಹಟ್ಟಿಯ ಪೊಲೀಸ್ ಠಾಣೆ ಎದುರು ಜಮಾವಣೆಗೊಂಡ ಹಿಂದೂಪರ ಸಂಘಟನೆಗಳು ನ್ಯಾಯ ಒದಗಿಸುವಂತೆ ಘೋಷಣೆಗಳನ್ನು ಕೂಗಿದರು. ಮೆರವಣಿಗೆಗೆ ಅವಕಾಶ ಕೊಡಬೇಕೆಂದು ಪೊಲೀಸ್ ಠಾಣೆ ಎದುರು ವಾಗ್ವಾದ ನಡೆಸಿದರು.
ಈ ಸಂದರ್ಭದಲ್ಲಿ ಬಾಗಲಕೋಟೆ ಎಸ್. ಪಿ. ಲೋಕೇಶ್ ಜಗಲಾಸರ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದರು. ಆದರೂ ಪ್ರತಿಭಟನಾಕಾರರು ಒಪ್ಪಲಿಲ್ಲ. ಪೊಲೀಸರ ಆದೆಶ ಧಿಕ್ಕರಿಸಿ ಹಿಂದೂ ಸಂಘಟನೆಗಳು ಪ್ರತಿಭಟನಾ ಮೆರವಣಿಗೆಗೆ ಮುಂದಾಗಿದ್ದಾರೆ. ಮೆರವಣಿಗೆಯಲ್ಲಿ ನೂರಾರು ಜನರು ಭಾಗಿಯಾಗಿದ್ದರು. ತಹಶಿಲ್ದಾರರ ಕಚೇರಿಗೆ ತೆರಳಿ ಈ ಹಲ್ಲೆ ನಡೆಸಿದವರನ್ನು ತಕ್ಷಣವೇ ಬಂಧಿಸಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಸಲ್ಲಿಸಿದರು.

ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement