ಸಂಸತ್ತಿನಲ್ಲಿ ಕುಳಿತು ಕೇಳದ ವ್ಯಕ್ತಿಗೆ ನಾನು ಹೇಗೆ ಉತ್ತರಿಸಲಿ: ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ

ನವದೆಹಲಿ: ಸಂಸತ್ತಿನಲ್ಲಿ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವ್ಯಂಗ್ಯವಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಯಾರ ಮಾತನ್ನೂ ಕೇಳದ ಮತ್ತು ಸದನದಲ್ಲಿ ಕುಳಿತುಕೊಳ್ಳದ” ವ್ಯಕ್ತಿಗೆ ಉತ್ತರಿಸಲು ಸಾಧ್ಯವಿಲ್ಲ ಎಂದು ಬುಧವಾರ ಹೇಳಿದ್ದಾರೆ.
ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಪ್ರಧಾನಿ ಮೋದಿ, ಸಂಸತ್ತಿನಲ್ಲಿ ಪ್ರತಿಪಕ್ಷಗಳು ಎತ್ತಿರುವ ಪ್ರಶ್ನೆಗಳಿಗೆ ವಿವಿಧ ಸಚಿವಾಲಯಗಳು ವಿವರವಾದ ಉತ್ತರಗಳನ್ನು ನೀಡಿವೆ ಎಂದು ಹೇಳಿದರು.
ನಿರುದ್ಯೋಗ ಮತ್ತು ಭಾರತ-ಚೀನಾ ಸಮಸ್ಯೆಯ ಕುರಿತು ರಾಹುಲ್ ಗಾಂಧಿಯವರ ಪ್ರಶ್ನೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ ಮೋದಿ, “ನಾನು ಪ್ರತಿ ವಿಷಯದ ಬಗ್ಗೆ ಸತ್ಯವುಳ್ಳ ಮಾಹಿತಿಗಳನ್ನು ನೀಡಿದ್ದೇನೆ ಮತ್ತು ಪ್ರತಿಯೊಂದು ವಿಷಯದ ಬಗ್ಗೆ ಸತ್ಯದ ಆಧಾರದ ಮೇಲೆ ಮಾತನಾಡಿದ್ದೇನೆ. ಕೆಲವು ವಿಷಯಗಳಲ್ಲಿ ನಮ್ಮ ವಿದೇಶಾಂಗ ಸಚಿವಾಲಯ ಮತ್ತು ರಕ್ಷಣಾ ಸಚಿವಾಲಯವು ಉತ್ತರ ನೀಡಿದೆ. ವಿವರವಾದ ಉತ್ತರಗಳು ಮತ್ತು ಅಗತ್ಯವಿರುವಲ್ಲೆಲ್ಲಾ ನಾನು ಸಹ ಮಾತನಾಡಿದ್ದೇನೆ. ಕೇಳದ ಮತ್ತು ಸದನದಲ್ಲಿ ಕುಳಿತುಕೊಳ್ಳದ ವ್ಯಕ್ತಿಗೆ ನಾನು ಹೇಗೆ ಉತ್ತರಿಸಲಿ ಎಂದು ಪ್ರಶ್ನಿಸಿದ್ದಾರೆ.

ಪ್ರಮುಖ ಸುದ್ದಿ :-   'ಇದು ಸಾಮಾನ್ಯ ಚುನಾವಣೆಯಲ್ಲ' : ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೂ ಮುನ್ನ ಬಿಜೆಪಿ-ಎನ್‌ಡಿಎ ಅಭ್ಯರ್ಥಿಗಳಿಗೆ ಪತ್ರ ಬರೆದ ಪ್ರಧಾನಿ ಮೋದಿ

ತಮ್ಮ ಸರ್ಕಾರ ಮಾತುಕತೆಯಲ್ಲಿ ನಂಬಿಕೆ ಇಟ್ಟಿದ್ದು, ಯಾರ ಮೇಲೂ ದಾಳಿ ಮಾಡುವುದಿಲ್ಲ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.
ನಾವು ಯಾರ ಮೇಲೂ ದಾಳಿ ಮಾಡುವುದಿಲ್ಲ, ಬದಲಿಗೆ ಸಂವಾದ ನಡೆಸುವುದನ್ನು ನಾವು ನಂಬುತ್ತೇವೆ. ಕೆಲವೊಮ್ಮೆ, ಚರ್ಚೆಗಳು (ವಾದ-ವಿವಾದ), ಅಡಚಣೆಗಳು (ಟೋಕಾ-ಟಕಿ) (ಸಂಸತ್ತಿನಲ್ಲಿ) , ನಾನು ಇದನ್ನು ಸ್ವಾಗತಿಸುತ್ತೇನೆ ಎಂದು ಮೋದಿ ಹೇಳಿದರು.
ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ರಾಹುಲ್ ಗಾಂಧಿ ಅವರು ನಿರುದ್ಯೋಗ, ಭಾರತ-ಚೀನಾ ಗಡಿ ವಿವಾದದಂತಹ ವಿಷಯಗಳ ಬಗ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ರಾಹುಲ್ ಗಾಂಧಿಯವರ ಹೇಳಿಕೆಗಳ ನಂತರ, ಪ್ರಧಾನಿ ಮೋದಿ ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದ್ದರು ಮತ್ತು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ವಿರುದ್ಧವೂ ವಾಗ್ದಾಳಿ ನಡೆಸಿದ್ದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement