ಹಿಜಾಬ್‌ ವಿವಾದ: ಬೆಂಗಳೂರಲ್ಲಿ ಫೆಬ್ರವರಿ 22ರ ವರಗೆ ಶಾಲಾ -ಕಾಲೇಜು ಸುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಂದಿನ ಎರಡು ವಾರಗಳ ವರೆಗೆ ನಗರದಲ್ಲಿ ಶಾಲಾ ಕಾಲೇಜು ಸುತ್ತ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ನಗರದ ಶಾಲಾ-ಕಾಲೇಜುಗಳ ಸುತ್ತಮುತ್ತ ಯಾವುದೇ ರೀತಿಯ ಗುಂಪು ಅಥವಾ ಆಂದೋಲನ ನಿರ್ಬಂಧಿಸಲು ಫೆ.22 ರ ತನಕ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ನಿಷೇಧಿತ ಕ್ರಮಗಳಲ್ಲಿ ಶಿಕ್ಷಣ ಸಂಸ್ಥೆಗಳಿಂದ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ರೀತಿಯ ಸಭೆ ಅಥವಾ ಪ್ರತಿಭಟನೆಯನ್ನು ನಿಷೇಧಿಸಲಾಗಿದೆ.

ನಗರದಲ್ಲಿರುವ ಶಾಲೆಗಳು, ಪದವಿಪೂರ್ವ ಕಾಲೇಜುಗಳು, ಪದವಿ ಕಾಲೇಜುಗಳು ಅಥವಾ ಇತರ ಶಿಕ್ಷಣ ಸಂಸ್ಥೆಗಳ ಸುತ್ತಲೂ ಭಾರತೀಯ ಅಪರಾಧ ದಂಡ ಸಂಹಿತೆ ಕಲಂ (ಸಿಆರ್‌ಪಿಸಿ) ಸೆಕ್ಷನ್ 144 ಅನ್ನು ವಿಧಿಸಲಾಗುತ್ತದೆ. ಫೆಬ್ರವರಿ 9 ರಿಂದ ಫೆಬ್ರವರಿ 22 ರ ವರೆಗೆ ಎರಡು ವಾರಗಳ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ತಿಳಿಸಲಾಗಿದೆ.
ಶಿಕ್ಷಣ ಸಂಸ್ಥೆಗಳ ಗೇಟ್‍ನಿಂದ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಭೆ ಮಾಡುವುದನ್ನು ನಿಷೇಧಿಸಲಾಗಿದೆ. ಅಷ್ಟೇ ಅಲ್ಲದೇ ಆಂದೋಲನಗಳು ಅಥವಾ ಪ್ರತಿಭಟನೆಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಎರಡು ವಾರಗಳವರೆಗೆ ನಿಷೇಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement