ಹಿಜಾಬ್‌ ಅರ್ಜಿ ಹೈಕೋರ್ಟ್‌ ವಿಸ್ತೃತ ಪೀಠಕ್ಕೆ ಉಲ್ಲೇಖ: ಶಾಲಾ ಸಮವಸ್ತ್ರ ಸುತ್ತೋಲೆ ಬಗ್ಗೆ ಶಿಕ್ಷಣ ಸಚಿವರ ಸ್ಪಷ್ಟನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಮಧ್ಯಂತರ  ಪರಿಹಾರ ಒದಗಿಸಲು ಹೈಕೋರ್ಟ್‌ ಯಾವುದೇ ಆದೇಶ ಹೊರಡಿಸದ ಕಾರಣ, ಸರ್ಕಾರದ ಅಧಿಸೂಚನೆ (ಡ್ರೆಸ್ ಕೋಡ್ʼಗೆ ಸಂಬಂಧಿಸಿದಂತೆ) ಜಾರಿಯಲ್ಲಿರುತ್ತದೆ. ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಸಮವಸ್ತ್ರ ಕಡ್ಡಾಯ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕೋರ್ಟಿನಿಂದ ತೀರ್ಪು ಪ್ರಕಟವಾದ ತಕ್ಷಣ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಅದಕ್ಕೆ ಮುಂದೆ ಪ್ರತಿಯೊಬ್ಬರು ಬದ್ಧರಾಗಬೇಕಾಗುತ್ತದೆ. ಕೋರ್ಟ್ ನಲ್ಲಿದ್ದ ವಿಷಯ ತೀರ್ಪು ಬರಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಅದು ವಿಸ್ತೃತ ಪೀಠಕ್ಕೆ ವರ್ಗಾವಣೆ ಆಗಿದೆ. ಯಾವುದೇ ಮಧ್ಯಂತರ ಆದೇಶವೂ ಆಗಿಲ್ಲ. ಹೀಗಾಗಿ ಸರ್ಕಾರದ ಸಮವಸ್ತ್ರ ಸಂಹಿತೆ ಸುತ್ತೋಲೆ ಈಗಲೂ ಜಾರಿಯಲ್ಲಿದೆ. ಅದನ್ನು ಒಪ್ಪಿಕೊಂಡು ಶಾಲಾ – ಕಾಲೇಜುಗಳಿಗೆ ಬನ್ನಿ. ಪಾಠವನ್ನು ಕಲಿತು ಪರೀಕ್ಷೆ ಬರೆದು ನಿಮ್ಮ ವಿದ್ಯಾಭ್ಯಾಸವನ್ನು ಉತ್ತಮವಾಗಿ ಮುಂದುವರಿಸಿ ಎಂದು ಅವರು ಮನವಿ ಮಾಡಿದರು.
ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿಕೆ ಬಗ್ಗ ಇನ್ನೂ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ರಜೆ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.
ಉಡುಪಿಯಲ್ಲಿ ಹಿಜಾಬ್‌ ಧರಿಸಿ ಬರುತ್ತೇವೆ ಎನ್ನುವ ಮಕ್ಕಳಿಗೆ ಮನೆಯಲ್ಲಿಯೇ ಕುಳಿತುಕೊಂಡು, ಅವರ ಸಂಪ್ರದಾಯವನ್ನು ಪಾಲಿಸಿಕೊಂಡು ಶಿಕ್ಷಣ ಪಡೆಯುವ ಆಯ್ಕೆಯನ್ನು ವಿದ್ಯಾಸಂಸ್ಥೆ ನೀಡಿತ್ತು, ಆದರೆ ಮಕ್ಕಳು ಯಾರದೋ ಪ್ರಚೋದನೆಗೆ ಒಳಗಾಗಿ ಕೋರ್ಟ್‌ ಮೆಟ್ಟಿಲೇರಿದ್ದಾರೆ, ಇದರಲ್ಲಿ ಮಕ್ಕಳ ತಪ್ಪು ಏನೂ ಇಲ್ಲ. ಕೆಲ ಸಂಘಟನೆಗಳು ತಮ್ಮ ಲಾಭಕ್ಕಾಗಿ ಅವರನ್ನು ಬಳಸಿಕೊಂಡು ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದರು.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement