ಬೆಂಗಳೂರು: 2011 ರ ಕೆಪಿಎಸ್ಸಿ 362 ಪ್ರೊಬೆಷನರಿ ಅಭ್ಯರ್ಥಿಗಳ ಆಯ್ಕೆಯನ್ನು ಸಕ್ರಮಗೊಳಿಸಲು ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ಯ ಸರ್ಕಾರ ಅಸಿಂಧುಗೊಂಡಿರುವ ಅಭ್ಯರ್ಥಿಗಳ ನೇಮಕ ಮಾಡಿಕೊಳ್ಳಲು ಕರ್ನಾಟಕ ನಾಗರೀಕ ಸೇವೆಗಳು (2011ರ ಗೆಜೆಟ್ ಪ್ರೊಬೆಷನರಿ ನೇಮಕಾತಿ ಊರ್ಜಿತಗೊಳಿಸಲು) ವಿಶೇಷ ನೇಮಕಾತಿ ಕಾಯ್ದೆಯನ್ನು ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಮಂಡನೆ ಮಾಡಲು ನಿರ್ಧಾರ ಕೈಗೊಲ್ಳಲಾಗಿದೆ ಎಂದು ಕಾನೂನೂ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ಕೆಪಿಎಸ್ಸಿಯಿಂದ ಈ ಹಿಂದೆ ಊರ್ಜಿತಗೊಳಿಸಿದ್ದ ಪಟ್ಟಿಯನ್ನು ಒಪ್ಪಿಕೊಂಡು ಅದರಂತೆ ಕಾನೂನು ರಚಿಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.
2011ರ ಪ್ರೊಬೆಷನರಿ ಹುದ್ದೆಗಳ ಅಭ್ಯರ್ಥಿಗಳ ಆಯ್ಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಕೆಲವು ಅಭ್ಯರ್ಥಿಗಳು ಕೋರ್ಟ್ ಮೆಟ್ಟಿಲು ಹತ್ತಿದ್ದರಿಂದ ಸುಪ್ರೀಂ ಕೋರ್ಟ್ ಆ ನೇಮಕಾತಿಯನ್ನು ರದ್ದುಗೊಳಿಸಿತ್ತು.
ಆದರೆ, ಕೋರ್ಟ್ನ ಈ ಆದೇಶದಿಂದ ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂದುಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು, 362 ಅಭ್ಯರ್ಥಿಗಳ ನೇಮಕಕ್ಕೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು.
ಇದಲ್ಲದೆ ಕೇಂದ್ರ ಹಾಗೂ ರಾಜ್ಯ 45 : 55 ಅನುಪಾತದಲ್ಲಿ 4500 ಕೋಟಿ ರೂ ಸಾಲ ಪಡೆಯಲು ರಾಜ್ಯ ಸರ್ಕಾರದ ತೀರ್ಮಾನಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ