ಚೆನ್ನೈ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಚೆನ್ನೈ: ಭಾರತೀಯ ಜನತಾ ಪಕ್ಷದ (ಬಿಜೆಪಿ) ತಮಿಳುನಾಡು ಕಚೇರಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಗುರುವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಬಿಜೆಪಿ ಪದಾಧಿಕಾರಿಯೊಬ್ಬರು ಬಾಂಬ್ ಎಸೆದ ಘಟನೆಗೆ ಆಡಳಿತಾರೂಢ ಡಿಎಂಕೆಯನ್ನು ದೂಷಿಸಿದ್ದಾರೆ ಮತ್ತು ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವಿದೆ ಎಂದು ಹೇಳಿದ್ದಾರೆ.
ದಾಳಿಯ ಬಗ್ಗೆ ಬಿಜೆಪಿ ಪೊಲೀಸರಿಗೆ ದೂರು ನೀಡಿದೆ.
ನಮ್ಮ ಕಚೇರಿಯ ಮೇಲೆ ನಸುಕಿನ 1:30 ರ ಸುಮಾರಿಗೆ ಪೆಟ್ರೋಲ್ ಬಾಂಬ್ ಎಸೆಯಲಾಯಿತು. 15 ವರ್ಷಗಳ ಹಿಂದೆ ಇದೇ ರೀತಿಯ ಘಟನೆ ನಡೆದಿದ್ದು ಅದರಲ್ಲಿ ಡಿಎಂಕೆ ಪಾತ್ರವಿತ್ತು. ಈ ಘಟನೆಗೆ ತಮಿಳುನಾಡು ಸರ್ಕಾರ (ಪಾತ್ರ)ವನ್ನು ನಾವು ಖಂಡಿಸುತ್ತೇವೆ… ನಾವು ಪೊಲೀಸರಿಗೂ ತಿಳಿಸಿದ್ದೇವೆ… ಬಿಜೆಪಿ ಕಾರ್ಯಕರ್ತರು ಇಂತಹ ವಿಷಯಗಳಿಗೆ ಹೆದರುವುದಿಲ್ಲ ಎಂದು ಬಿಜೆಪಿ ನಾಯಕ ಕರಾಟೆ ತ್ಯಾಗರಾಜನ್ ಹೇಳಿದ್ದಾರೆ.
ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗೆ ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ವರದಿಯಾಗಿದೆ.
ಘಟನೆಯು ಮುಂಜಾನೆಯೇ ನಡೆದಿರುವುದರಿಂದ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಇಂದು ಬೆಳಗ್ಗೆ ಪಕ್ಷದ ಕಚೇರಿಯ ಮುಂದೆ ಬಿಜೆಪಿ ಮುಖಂಡರು ಜಮಾಯಿಸಿ, ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಇಂಡೋ-ಮ್ಯಾನ್ಮಾರ್ ಗಡಿ ಮೂಲಕ ಕಳ್ಳ ಸಾಗಣೆಯಲ್ಲಿ ತಂದ 11.5 ಕೋಟಿ ರೂ..ಮೌಲ್ಯದ 288 ಮೆಟ್ರಿಕ್ ಟನ್ ಅಡಕೆ ವಶಪಡಿಸಿಕೊಂಡ ಇ.ಡಿ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement