ಲಖಿಂಪುರ ಖೇರಿ ಘಟನೆ: ಕೇಂದ್ರ ಸಚಿವ ಅಜಯ್ ಮಿಶ್ರಾ ಮಗನಿಗೆ ಜಾಮೀನು

ಅಲಹಾಬಾದ್‌: ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಕಳೆದ ವರ್ಷ ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆ ವೇಳೆ ರೈತರ ಮೇಲೆ ಕಾರು ಹಾಯಿಸಿ ಕೊಂದ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಅವರ ಮಗ ಆಶೀಶ್ ಮಿಶ್ರಾ ಅವರಿಗೆ ಹೈಕೋರ್ಟ್‌ ಜಾಮೀನು ನೀಡಿದೆ.
ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಮುಖ್ಯ ಆರೋಪಿ ಆಶಿಶ್ ಮಿಶ್ರಾ ಅವರಿಗೆ ಜಾಮೀನು ಮಂಜೂರು ಮಾಡಿದೆ ಎಂದು ಅವರ ಪರ ವಕೀಲರು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗಳು ಆರಂಭವಾಗಿರುವ ಸಂದರ್ಭದಲ್ಲಿಯೇ ಆಶಿಶ್ ಮಿಶ್ರಾ ಅವರಿಗೆ ಜಾಮೀನು ದೊರಕಿದೆ.
ಕಳೆದ ವರ್ಷದ ಅಕ್ಟೋಬರ್ 3ರಂದು ಲಖಿಂಪುರ ಖೇರಿಯಲ್ಲಿ ಮೂರು ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಎಸ್‌ಯುವಿ ವಾಹನವೊಂದು ಹಾಯ್ದು ನಾಲ್ವರು ರೈತರು ಮತ್ತು ಒಬ್ಬ ಪತ್ರಕರ್ತನ ಸಾವಿಗೆ ಕಾರಣವಾಗಿತ್ತು. ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶೀಶ್ ಮಿಶ್ರಾ ಈ ಕಾರು ಚಲಾಯಿಸುತ್ತಿದ್ದರು ಎಂದು ಆರೋಪಿಸಲಾಗಿತ್ತು.
ಘಟನೆ ನಂತರ ಲಖಿಂಪುರ ಖೇರಿಯಲ್ಲಿ ವ್ಯಾಪಕ ಹಿಂಸಾಚಾರ ನಡೆದಿತ್ತು. . ಹಿಂಸಾಚಾರದಲ್ಲಿ ಬಿಜೆಪಿಯ ಇಬ್ಬರು ಕಾರ್ಯಕರ್ತರು ಸೇರಿ ಮೂವರು ಮೃತಪಟ್ಟಿದ್ದರು. ವ್ಯಾಪಕ ಆಕ್ರೋಶದ ಬಳಿಕ ಆಶೀಶ್ ಅವರನ್ನು ಬಂಧಿಸಲಾಗಿತ್ತು. ಅಜಯ್ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಎಂಬ ಆಗ್ರಹಗಳು ಕೇಳಿಬಂದಿದ್ದರೂ ನರೇಂದ್ರ ಮೋದಿ ಸಂಪುಟದಲ್ಲಿ ಅವರು ಮುಂದುವರಿದಿದ್ದಾರೆ.

ಪ್ರಮುಖ ಸುದ್ದಿ :-   'ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ' : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement