ಶಾಲೆಗಳನ್ನು ಶೀಘ್ರ ಆರಂಭಿಸಿ: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ಬೆಂಗಳೂರು: ಹಿಜಾಬ್ ವಿವಾದದಿಂದ ಶಿಕ್ಷಣವನ್ನು ಸ್ಥಗಿತ ಮಾಡುವುದು ಸರಿಯಲ್ಲ. ಶಾಲೆಗಳನ್ನು ಶೀಘ್ರಗತಿಯಲ್ಲಿ ಆರಂಭಿಸಿ ಎಂದು ಮುಖ್ಯ ನ್ಯಾಯಮೂರ್ತಿ ಸರ್ಕಾರಕ್ಕೆ ಗುರುವಾರ ಸೂಚಿಸಿದ್ದಾರೆ.
ಹಿಜಾಬ್ ವಿವಾದ ಸಂಬಂಧ ಮೂರನೇ ದಿನ ವಿಚಾರಣೆ ಇಂದು, ಗುರುವಾರ ಮಧ್ಯಾಹ್ನ ಆರಂಭವಾಯಿತು. ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ಥಿ, ನ್ಯಾ.ಖಾಜಿ ಜೈಬುನ್ನೀಸಾ, ನ್ಯಾ.ಕೃಷ್ಣ ಎಸ್.​ ದೀಕ್ಷಿತ್​ ಅವರಿರುವ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ.
ಎರಡು ದಿನಗಳ ಕಾಲ ಕೃಷ್ಣ ಎಸ್​.ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠದಿಂದ ಹಿಜಾಬ್​ ಕುರಿತ ಅರ್ಜಿಗಳ ವಿಚಾರಣೆ ನಡೆದ ಬಳಿಕ ಪ್ರಕರಣ ಸೂಕ್ಷ್ಮವಿರುವ ಕಾರಣ ಇದನ್ನು ನ್ಯಾಯಮೂರ್ತಿಗಳು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದರು.
ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿಯವರು, ಹಿಜಾಬ್​ ವಿವಾದದ ಕಾರಣಕ್ಕಾಗಿ ಶಾಲೆಗಳನ್ನು ಸ್ಥಗಿತಗೊಳಿಸಿದ ಸರ್ಕಾರದ ಕ್ರಮದ ವಿರುದ್ಧ ಬೇಸರ ವ್ಯಕ್ತಪಡಿಸಿದರು. ವಿವಾದ ಕಾರಣದಿಂದ ಮಕ್ಕಳನ್ನು ಶಿಕ್ಷಣದಿಂದ ದೂರ ಇಡುವುದು ಸರಿಯಲ್ಲ. ಶಾಲೆಗಳನ್ನು ಶೀಘ್ರಗತಿಯಲ್ಲಿ ಆರಂಭಿಸಿ ಎಂದು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement