ಸೋಮವಾರದಿಂದ ರಾಜ್ಯಾದ್ಯಂತ ಹೈಸ್ಕೂಲ್ ಪುನರಾರಂಭ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಭುಗಿಲೆದ್ದ ಹಿಜಾಬ್‌-ಕೇಸರಿ ಶಾಲು ವಿವಾದದ ಕುರಿತಾಗಿ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ತ್ರಿ ಸದಸ್ಯ ಪೀಠ ಶೀಘ್ರವೇ ಕಾಲಾ-ಕಾಲೇಜು ಆರಂಭಿಸಿ ಎಂದು ಸೂಚಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಿ ತೀರ್ಮಾನಿಸಿದ್ದು, ಸೋಮವಾರ ಫೆ. 14 ರಿಂದ 10 ನೇ ತರಗತಿಯವರೆಗೆ ಮಾತ್ರ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಹೇಳಿದ್ದಾರೆ.

ಮಹತ್ವದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ರಾಜ್ಯದಲ್ಲಿ 2 ಹಂತಗಳಲ್ಲಿ ಶಾಲೆ ಆರಂಭಿಸಲಾಗುವುದು. ಮೊದಲ ಹಂತದಲ್ಲಿ ಹೈಸ್ಕೂಲ್‌ ಅಂದರೆ 10ನೇ ತರಗತಿ ವರೆಗೆ ತರಗತಿಗಳನ್ನ ಆರಂಭಿಸಲಾಗುವುದು. ನಂತರ ಪರಿಸ್ಥಿತಿ ನೋಡಿ ಕಾಲೇಜು ಗಳನ್ನು ತೆರೆಯುವ ನಿರ್ಧಾರ ಮಾಡುತ್ತೇವೆ. ಈ ಬಗ್ಗೆ ನಾಳೆ, ಶುಕ್ರವಾರ ಸಭೆ ನಡೆಸಿ ನಿರ್ಧಾರ ತಿಳಿಸುತ್ತೇವೆ ಎಂದು ಹೇಳಿದ್ದಾರೆ.
ನಾಳೆ, ಶುಕ್ರವಾರ ಮಂತ್ರಿಗಳು, ಡಿಸಿ, ಎಸ್ ಪಿ ಮತ್ತು ಶಿಕ್ಷಣ ಅಧಿಕಾರಿಗಳ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

ಸಭೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, ಗೃಹ ಸಚಿವ ಆರಗ ಜ್ಞಾನೇಂದ್ರ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಅಡ್ವೋಕೆಟ್ ಜನರಲ್ ಪ್ರಬುಲಿಂಗ ನಾವಡಗಿ ಭಾಗವಹಿಸಿದ್ದರು.
ಹಿಜಾಬ್ ವಿವಾದ ಸಂಘರ್ಷಕ್ಕೆ ತಿರುಗಿದ ಹಿನ್ನಲೆಯಲ್ಲಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ಹಿಜಾಬ್‌ ಅರ್ಜಿಗಳನ್ನು ವಿಚಾರಣೆ ನಡೆಸಿದ ಹೈಕೋರ್ಟ್ ತ್ರಿಸದಸ್ಯ ಪೀಠವು ಮುಂದಿನ ವಿಚಾರಣೆಯನ್ನ ಸೋಮವಾರ ಮಧ್ಯಹ್ನ 2:30ರ ವರೆಗೆ ಮುಂದೂಡಿದೆ ಹಾಗೂ ವಿಚಾರಣೆ ಮುಗಿಯುವವರೆಗೂ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಡ್ರೆಸ್‌ ಬಳಸಬಾರದು, ಹಿಜಾಬ್-ಶಾಲು ಧರಿಸುವಂತಿಲ್ಲ ಎಂದು ಹೇಳಿದೆ.
ರಾಜ್ಯದಲ್ಲಿ ಶಾಂತಿ ನೆಮ್ಮದಿ ಮರಳಬೇಕು. ಕೆಲವು ದಿನಗಳ ಕಾಲ ನೀವು ನಿಮ್ಮ ನಂಬಿಕೆ ಬಿಡುವುದು ಒಳ್ಳೆಯದು. ಕೆಲವೇ ದಿನಗಳಲ್ಲಿ ಅಂತಿಮ ತೀರ್ಪು ಪ್ರಕಟಿಸುತ್ತೇವೆ. ಶೀಘ್ರದಲ್ಲಿಯೇ ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನ ಪ್ರಾರಂಭಿಸಬೇಕು ಎಂದು ನ್ಯಾಯಾಧೀಶರು ಸೂಚಿಸಿದ್ದಾರೆ.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement