ಬೆಚ್ಚಿಬೀಳಿಸುವ ವಿಡಿಯೋ:ಪಾದಚಾರಿಯನ್ನು ಕಾರಿನ ಬಾನೆಟ್ ಮೇಲೆ ಎಳೆದುಕೊಂಡು ಹೋದ ನಿವೃತ್ತ ಐಎಎಸ್ ಅಧಿಕಾರಿ ಪುತ್ರ…ದೃಶ್ಯ ವಿಡಿಯೊದಲ್ಲಿ ಸೆರೆ

ನವದೆಹಲಿ: ಅತಿವೇಗದ ಚಾಲನೆಯ ಮತ್ತೊಂದು ಘಟನೆಯಲ್ಲಿ, ದಕ್ಷಿಣ ದಿಲ್ಲಿಯ ಗ್ರೇಟರ್ ಕೈಲಾಶ್‌ನಲ್ಲಿ 27 ವರ್ಷದ ಕಾನೂನು ವಿದ್ಯಾರ್ಥಿಯೊಬ್ಬ ಪಾದಚಾರಿಗೆ ತನ್ನ ಕಾರನ್ನು ಡಿಕ್ಕಿ ಹೊಡೆದು ವಾಹನದ ಬಾನೆಟ್ ಬಿದ್ದ ಆತನನ್ನು ಬಾನೆಟ್‌ ಮೇಲೆ ಎಳೆದುಕೊಂಡುಬಂದು ಆತ ರಸ್ತೆಯಲ್ಲಿ ಬಿದ್ದ ನಂತರ ಸ್ಥಳದಿಂದ ಪರಾರಿಯಾಗಿದ್ದು, ನಂತರ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಾರದ ಆರಂಭದಲ್ಲಿ ಈ ಘಟನೆ ನಡೆದಿದ್ದು ಆರೋಪಿ ಚಾಲಕನನ್ನು ಖಾಸಗಿ ವಿಶ್ವವಿದ್ಯಾಲಯದ ಕಾನೂನು ವಿದ್ಯಾರ್ಥಿ ರಾಜ್ ಸುಂದರಂ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, 37 ವರ್ಷದ ಪಾದಚಾರಿ ಆನಂದ್ ವಿಜಯ್ ಮಂಡೇಲಿಯಾ ವಾಕಿಂಗ್‌ಗೆ ತೆರಳಿದ್ದರು. ಗ್ರೇಟರ್ ಕೈಲಾಶ್ ಭಾಗ-1 ರ ಬಿ ಬ್ಲಾಕ್ ಪ್ರದೇಶದಲ್ಲಿ ವೇಗವಾಗಿ ಬಂದ ಕಾರು ಅವರನ್ನು ಡಿಕ್ಕಿ ಹೊಡೆದು ಕೆಲವು ಮೀಟರ್‌ಗಳವರೆಗೆ ಎಳೆದೊಯ್ದಿದೆ. ಪಾದಚಾರಿಗೆ ತೀವ್ರ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು.
ಆರೋಪಿ ಚಾಲಕ ಮತ್ತು ಪೊಲೀಸರಿಗೆ ಮಾಹಿತಿ ನೀಡದೆ ಮಗನಿಗೆ ಆಶ್ರಯ ನೀಡಿದ ಆರೋಪದ ಮೇಲೆ ಆತನ ತಂದೆ ನಿವೃತ್ತ ಐಎಎಸ್ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಚಾಲಕನ ಕಾರನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಮಧ್ಯೆ, ಘಟನೆಯ ಸಿಸಿಟಿವಿ ದೃಶ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ದೃಶ್ಯಗಳಲ್ಲಿ, ಚಾಲಕನು ಪಾದಚಾರಿಯನ್ನು ಕಾರಿನ ಬಾನೆಟ್ ಮೇಲೆ ಎಳೆಯುವುದನ್ನು ಕಾಣಬಹುದು.
ಘಟನೆ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದ. ಆದರೆ, ಪೊಲೀಸರು ಶೋಧ ಆರಂಭಿಸಿ ನಂತರ ಆತನನ್ನು ಬಂಧಿಸಿದ್ದಾರೆ.

https://twitter.com/singhpuru2202/status/1492046672771559425?ref_src=twsrc%5Etfw%7Ctwcamp%5Etweetembed%7Ctwterm%5E1492046672771559425%7Ctwgr%5E%7Ctwcon%5Es1_&ref_url=https%3A%2F%2Ftv9kannada.com%2Ftrending%2Fshocking-video-car-hits-man-drives-with-him-on-bonnet-in-delhi-police-arrest-ex-ias-officer-and-son-over-hit-and-run-case-sct-335890.html

ಇದೇ ರೀತಿಯ ಮತ್ತೊಂದು ಘಟನೆಯಲ್ಲಿ, ಕಳೆದ ತಿಂಗಳು ರೋಹಿಣಿಯ ಬುಧ್ ವಿಹಾರ್‌ನಲ್ಲಿ ದೆಹಲಿ ಪೊಲೀಸ್ ಪೇದೆಯೊಬ್ಬರು ತಮ್ಮ ಕಾರನ್ನು ಬೈಕ್‌ಗೆ ಡಿಕ್ಕಿ ಹೊಡೆದ ನಂತರ 38 ವರ್ಷದ ಆಹಾರ ವಿತರಣಾ ಕಾರ್ಯನಿರ್ವಾಹಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ನಂತರ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪಿ ಪೊಲೀಸನನ್ನು ಬಂಧಿಸಲಾಗಿದೆ. ಆರೋಪಿ ಪಾನಮತ್ತನಾಗಿದ್ದ ಎಂದು ಸ್ಥಳೀಯರು ಹೇಳುತ್ತಿರುವುದು ಕೇಳಿಬರುತ್ತಿದೆ. ಮೃತನನ್ನು ಸಲೀಲ್ ತ್ರಿಪಾಠಿ ಎಂದು ಗುರುತಿಸಲಾಗಿದ್ದು, ಬುಧ್ ವಿಹಾರ್‌ನಲ್ಲಿ ತನ್ನ ತಾಯಿ, ಹೆಂಡತಿ ಮತ್ತು ಮಗುವಿನೊಂದಿಗೆ ವಾಸಿಸುತ್ತಿದ್ದರು. ಅವರ ಕುಟುಂಬದಲ್ಲಿ ಅವರು ಏಕೈಕ ದುಡಿಯುವವರಾಗಿದ್ದರು.

ಪ್ರಮುಖ ಸುದ್ದಿ :-   ಬೆಂಬಲ ಹಿಂಪಡೆದ ಮೂವರು ಪಕ್ಷೇತರ ಶಾಸಕರು : ಸಂಕಷ್ಟದಲ್ಲಿ ಹರಿಯಾಣದ ಬಿಜೆಪಿ ಸರ್ಕಾರ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement