ಸರ್ಕಾರಿ ಶಾಲೆಯಲ್ಲೇ ವಿದ್ಯಾರ್ಥಿಗಳಿಂದ ನಮಾಜ್..!?

ಮಂಗಳೂರು:ಹಿಜಾಬ್​ ವಿವಾದ ರಾಷ್ಟ್ರಾದ್ಯಂತ ಸದ್ದು ಮಾಡುತ್ತಿರುವಾಗ, ಮತ್ತೊಂದು ಹೊಸ ವಿವಾದಕ್ಕೆ ಎಡೆ ಮಾಡಿಕೊಡುವ ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಕೆಲವು ವಿದ್ಯಾರ್ಥಿಗಳು ಶಾಲೆಯಲ್ಲೇ ನಮಾಜ್ ಮಾಡಿದ್ದಾರೆ ಎಂದು ಹೇಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಂಕತ್ತಡ್ಕ ಸರ್ಕಾರಿ ಶಾಲೆಯಲ್ಲಿ ಈ ನಮಾಜ್ ಪ್ರಕರಣ ನಡೆದಿದೆ ಎಂದು ವರದಿಯಾಗಿದ್ದು, ಇಲ್ಲಿ 6-7ನೇ ತರಗತಿಯ ಐದು ಮಂದಿ ವಿದ್ಯಾರ್ಥಿಗಳು ನಮಾಜ್ ಮಾಡಿದ್ದ ಪೋಟೋ ಹಾಗೂ ವಿಡಿಯೋ ವೈರಲ್‌ ಆದ ನಂತರ ಸಾರ್ವಜನಿಕರ ಆಕ್ಷೇಪಗಳು ವ್ಯಕ್ತವಾಗಿದೆ..
ಕಳೆದ ಮೂರು ವಾರಗಳಿಂದ ಶಾಲಾ ಕೊಠಡಿಯಲ್ಲಿ ಈ ವಿದ್ಯಾರ್ಥಿಗಳು ನಮಾಜ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣದ ಸತ್ಯಾಸತ್ಯತೆ ಕೂಲಂಕಷವಾಗಿ ತನಿಖೆ ನಡೆಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

ನಿಮ್ಮ ಕಾಮೆಂಟ್ ಬರೆಯಿರಿ

advertisement