ಹಿಂದುಳಿದ ವರ್ಗಗಳಿಗೆ ಪ್ರತ್ಯೇಕ ಮೀಸಲಾತಿ ನೀಡದಂತೆ ಸುಪ್ರೀಂಕೋರ್ಟ್‌ ಸೂಚನೆ: ಸದ್ಯಕ್ಕೆ ಜಿಪಂ-ತಾಪಂ ಚುನಾವಣೆ ಅನುಮಾನ ಎಂದ ಈಶ್ವರಪ್ಪ

ಬೆಂಗಳೂರು: ಜಿಲ್ಲಾ ಪಂಚಾಯತ ಹಾಗೂ ತಾಲ್ಲೂಕು ಪಂಚಾಯತ ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಬಗ್ಗೆ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಜಿಪಂ, ತಾಪಂ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಮಾತ್ರ ಮೀಸಲಾತಿ ಅನ್ವಯ. ಹಿಂದುಳಿದ ವರ್ಗಳಿಗೆ ಮೀಸಲಾತಿ ನೀಡುವಕದಕ್ಕೆ ತಡೆ ನೀಡಿರುವುದರಿಂದ ಜಿಪಂ ಹಾಗೂ ತಾಪಂ ಚುನಾವಣೆ ಸದ್ಯಕ್ಕೆ ನಡೆಯುವುದು ಅನುಮಾನ ಎಂದು ಹೇಳಿದ್ದಾರೆ.  ಸುಪ್ರೀಂ ಕೋರ್ಟ್ ಆದೇಶ ಆಗಿರುವುದರಿಂದ ಹಿಂದುಳಿದ ವರ್ಗಗಳು ಸಾಮಾನ್ಯ ಕೆಟಗರಿಗೆ ಸೇರುತ್ತಾರೆ ಎಂದು ಹೇಳಿದೆ. ಹಿಂದುಳಿದ ವರ್ಗಳಿಗೆ ಮೀಸಲಾತಿ ನೀಡಬೇಕಾದರೆ ಜನಸಂಖ್ಯೆ ಹಾಗೂ ನಿಖರವಾದ ರಾಜಕೀಯ ಪ್ರಾತಿನಿಧ್ಯಗಳ ಬಗ್ಗೆ ಅಂಕಿ-ಅಂಶಗಳನ್ನು ಕೇಳಿದೆ ಎಂದು ಅವರು ತಿಳಿಸಿದರು. ಹೀಗಾಗಿ ಚುನಾವಣೆ ನಮ್ಮ ಕಾಲಾವಧಿಯಲ್ಲಿ ನಡೆಯುವ ಸಾಧ್ಯತೆ ಇಲ್ಲ ಎಂದು ಹೇಳೀದ್ದಾರೆ.
ಚುನಾವಣೆ ನಡೆಸಲು ನಾವು ಹಿಂದೇಟು ಹಾಕುತ್ತಿಲ್ಲ. ಚುನಾವಣಾ ಆಯೋಗ ಕ್ಷೇತ್ರ ಪುನರ್ವಿಂಗಡನೆ ಹಾಗೂ ಮೀಸಲಾತಿ ಬಗ್ಗೆ ಘೋಷಣೆಯನ್ನು ಮಾಡಿದೆ.  ಲಕ್ಷ್ಮೀನಾರಾಯಣ್ ನೇತೃತ್ವದಲ್ಲಿ ಕಮಿಟಿ ಮಾಡಿದ್ದೆವು. ಈಗ ಸುಪ್ರೀಂ ಕೋರ್ಟ್ ಆದೇಶ ಬಂದಿದೆ. ಇದರ ಪ್ರಕಾರ ಎಸ್ಸಿ, ಎಸ್ಟಿಗೆ ಮಾತ್ರ ಮೀಸಲಾತಿ ಅನ್ವಯ ಎಂದು ಹೇಳಿದೆ. ಇದರಿಂದ ಚುನಾವಣೆ ಪ್ರಕ್ರಿಯೆ ವಿಳಂಬವಾಗಿದೆ. ಸುಪ್ರೀಂ ಕೋರ್ಟ್‌ ತೀರ್ಪಿನ ಬಗ್ಗೆ ತಜ್ಞರ ಜೊತೆ ಚರ್ಚಿಸಬೇಕು.  ನಂತರ ಇದರ ಬಗ್ಗೆ ನಿರ್ಧರಿಸಬೇಕು ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀದಂತೆ ಸುಪ್ರೀಕೋರ್ಟ್‌ ಆದೇಶದ ಹಿನ್ನಲೆಯಲ್ಲಿ ಪ್ರತಿಕ್ಷಗಳ ಜೊತೆಗೂ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ  ಕಾನೂನು ತಜ್ಞರ ಜೊತೆಗೂ ಮಾತನಾಡುತ್ತೇನೆ. ಕಾನೂನು ಬದ್ಧವಾಗಿ ಚುನಾವಣೆ ನಡೆಯಬೇಕು ಎಂದು ನಾವು ಬಯಸುತ್ತೇವೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement