ಕರ್ನಾಟಕದ ಪದವಿ ಪೂರ್ವ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಿ ಆದೇಶ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಈಗಾಗಲೇ ಪದವಿ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಈಗ ಪದವಿ ಪೂರ್ವ ಕಾಲೇಜುಗಳಿಗೆ ಫೆಬ್ರವರಿ 15ರ ವರೆಗೆ ರಜೆ ವಿಸ್ತರಣೆ ಮಾಡಲಾಗಿದೆ.
ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ, ಸುತ್ತೋಲೆ ಹೊರಡಿಸಿದ್ದು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಫೆಬ್ರವರಿ 12, 13ರ ಭಾನುವಾರ ರಜಾ ದಿನ ಸಹಿತವಾಗಿ ಫೆಬ್ರವರಿ 14, 15ರ ವರೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ( Pu College ) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ರಜೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ರಾಜ್ಯಾಧ್ಯಂತ ಪದವಿ, ಪಿಜಿ, ಇಂಜಿನಿಯರಿಂಗ್, ಡಿಪ್ಲೋಮಾ ಕಾಲೇಜುಗಳಿಗೆ ರಜೆಯನ್ನು ಫೆಬ್ರವರಿ 16ರವರೆಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಪಿಯುಸಿ ತರಗತಿಗಳಿಗೆ ರಜೆ ಘೋಷಣೆಯ ನಿರ್ಧಾರ ಮಾಡಿರಲಿಲ್ಲ. ಈಗ ಪದವಿ ಪೂರ್ವ ಕಾಲೇಜುಗಳಿಗೆ ಫೆಬ್ರವರಿ 15ರ ವರೆಗೆ ರಜೆಯನ್ನು ವಿಸ್ತರಣೆ ಮಾಡಿ, ಶಿಕ್ಷಣ ಇಲಾಖೆ ಆದೇಶಿಸಿದೆ.

ಪ್ರಮುಖ ಸುದ್ದಿ :-   ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement