ಬಾಗಲಕೋಟೆ ಜಿಲ್ಲೆ ಸರ್ಕಾರಿ ಶಾಲೆಯಲ್ಲಿ ನಮಾಜ್ ಮಾಡಿದ ವಿದ್ಯಾರ್ಥಿಗಳು…!?

ಬಾಗಲಕೋಟೆ: ರಾಜ್ಯದಲ್ಲಿ ಹಿಜಾಬ್ ವಿವಾದದ ಮಧ್ಯೆಯೇ ರಾಜ್ಯದ ಕೆಲ ಶಾಲೆಗಳಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡುತ್ತಿರುವ ಘಟನೆಗಳು ವರದಿಯಾಗಿವೆ. ದಕ್ಷಿಣ ಕನ್ನಡದ ಕಡಬ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ನಮಾಜ್‌ ಮಾಡಿದ ಬೆನ್ನಲ್ಲೇ ಈಗ ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡಿದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಶಾಲಾ ಕೊಠಡಿಗಳ ಮುಂದಿನ ವರಾಂಡಾದಲ್ಲಿ ವಿದ್ಯಾರ್ಥಿನಿಯರು ನಮಾಜ್‌ ಮಾಡುತ್ತಿರುವ ವಿಡಿಯೊ ವೈರಲ್‌ ಆಗಿದೆ.
ಶಿಕ್ಷಕರ ಗಮನಕ್ಕೂ ಬಾರದಂತೆ ವಿದ್ಯಾರ್ಥಿಗಳು ನಮಾಜ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಮತ್ತೊಮ್ಮೆ ಶಾಲೆಯಲ್ಲಿ ನಮಾಜ್ ಮಾಡದಂತೆ ಸೂಚನೆ ನೀಡಲಾಗಿದೆ. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಶಿಕ್ಷಕರು ಭರವಸೆ ನೀಡಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬಿಜೆಪಿಯಿಂದ ಕೆ.ಎಸ್‌. ಈಶ್ವರಪ್ಪ ಉಚ್ಚಾಟನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement