ಬೆಂಗಳೂರಿನಲ್ಲೂ ಹಿಜಾಬ್ ವಿವಾದ: ಖಾಸಗಿ ಶಾಲೆಯಲ್ಲಿ ಬಿಗುವಿನ ವಾತಾವರಣ

ಬೆಂಗಳೂರು: ಹಿಜಾಬ್ ವಿವಾದ ಈಗ ರಾಜ್ಯ ರಾಜಧಾನಿ ಬೆಂಗಳೂರಿಗೂ ಕಾಲಿಟ್ಟಿದೆ. ಹೈಕೋರ್ಟ್ ಮಧ್ಯಂತರ ಆದೇಶದ ಮಧ್ಯೆಯೂ ಚಂದ್ರಾಲೇಔಟ್ ನ ಸರಕಾರಿ ಶಾಲೆಗೆ ಮುಸ್ಲಿಂ ವಿದ್ಯಾರ್ಥಿನಿಯರು ಬುರ್ಖಾ ಹಾಗೂ ಹಿಜಾಬ್ ಧರಿಸಿ ಬಂದಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.
ಬೆಂಗಳೂರಿನ ಚಂದ್ರಾಲೇಔಟ್ ನಲ್ಲಿರುವಂತ ವಿದ್ಯಾಸಾಗರ್ ಇಂಗ್ಲೀಷ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಇಂದು ಹಿಜಾಬ್ ಧರಿಸಿ ಶಾಲೆಗೆ ಬಂದಿದ್ದಾರೆ. ಮುಖ್ಯ ಶಿಕ್ಷಕರು ನ್ಯಾಯಾಲಯದ ಆದೇಶದ ಅನ್ವಯ ಯಾವುದೇ ಧಾರ್ಮಿಕ ಸಂಕೇತದ ವಸ್ತ್ರ ಧರಿಸಿ ಬರುವಂತಿಲ್ಲ ಎಂದು ಶಿಕ್ಷಕರು ಸೂಚಿಸಿದ್ದಾರೆ, ಹಾಗೂ ಹಿಜಾಬ್ ತೆಗೆದು ತರಗತಿಗೆ ಹಾಜರಾಗುವಂತೆ ಮನವಿ ಮಾಡಿದ್ದಾರೆ.
ಈ ವೇಳೆ ಪೋಷಕರು, ಸಹ ಶಾಲೆಗೆ ಆಗಮಿಸಿದ್ದು, ಶಿಕ್ಷಕರೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ನೂರಾರು ಜನರು ಶಾಲೆಯ ಮುಂದೆ ಜಮಾಯಿಸಿದ್ದು ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಶಾಲೆಯ ನೋಟಿಸ್‌ ಬೋರ್ಡ್ ನಲ್ಲಿ ಹಿಜಾಬ್ ಧರಿಸುವುದಕ್ಕೆ ಅವಕಾಶ ಇಲ್ಲ ಎಂದು ಬರೆಯಲಾಗಿತ್ತು. ಆದರೆ ಈ ಬರಹದಲ್ಲಿ ಅಶ್ಲೀಲವಾಗಿ ಬರೆಯಲಾಗಿದೆ ಎಂದು ವಿದ್ಯಾರ್ಥಿನಿಯರ ಪೋಷಕರು ಆರೋಪಿಸಿ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದ್ದು, ಆದರೆ ಶಾಲಾ ಅಭಿವೃದ್ಧಿ ಮಂಡಳಿ ಇದನ್ನು ನಿರಾಕರಿಸಿದೆ.
ಶಾಲೆಗೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಡಿಡಿಪಿಐ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ.
ಈ ಘಟನೆ ಕುರಿತು ಬೆಂಗಳೂರು ದಕ್ಷಿಣ ಶಿಕ್ಷಣ ಅಧಿಕಾರಿ ಹಿಜಾಬ್ ವಿವಾದ ಆಗಿಲ್ಲ. ಪೋಷಕರಿಗೆ ಮಾಹಿತಿ ಕೊರತೆ ಇದೆ. ಮಕ್ಕಳು ಹೇಳಿದ್ದನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಇನ್ ಶಿಯಲ್ ವಿಚಾರವಾಗಿ ಶಿಕ್ಷಕಿ ಮತ್ತು ಮಕ್ಕಳ ಮಧ್ಯೆ ಮಿಸ್ ಕಮಿನ್ಯೂಕೇಷನ್ ಆಗಿದೆ ಅಷ್ಟೇ. ಬೋರ್ಡ್ ಮೇಲೆ ಕೆಎಲ್‍ಎಸ್ ಅಂತ ಬರೆಯಲಾಗಿತ್ತು. ಅದನ್ನು ಬಗೆ ಹರಿಸುವ ಕೆಲಸ ಆಗಿದೆ. ಧರ್ಮದ ವಸ್ತ್ರ ಧರಿಸಲು ಅವಕಾಶ ಇಲ್ಲ. ಶಾಲೆ ಆಡಳಿತ ತಿಳಿಸಿರುವ ಸಮವಸ್ತ್ರ ಹಾಕಬೇಕು ಎಂದು ಶಿಕ್ಷಕಿ ಹೇಳಿದ್ದಾರೆ. ಇದನ್ನು ಮಕ್ಕಳು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಸೋಮವಾರದಿಂದ ಮಕ್ಕಳು ಸಮವಸ್ತ್ರದಲ್ಲಿ ಬರುತ್ತಾರೆ. ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement