ಹಿಜಾಬ್ ಧರಿಸಿದ ಮಹಿಳೆಯೇ ಮುಂದೊಂದು ದಿನ ಭಾರತದ ಪ್ರಧಾನಿಯಾಗ್ತಾರೆ: ಓವೈಸಿ

ಲಕ್ನೋ: ಹಿಜಾಬ್ ಧರಿಸಿದ ಮಹಿಳೆಯೇ ದೇಶದಲ್ಲಿ ಮುಂದೊಂದು ದಿನ ಪ್ರಧಾನಿ ಹುದ್ದೆಗೆ ಏರುತ್ತಾರೆ ಎಂದು ಸಂಸದ ಅಸಾದುದ್ದೀನ್ ಓವೈಸಿ ಭವಿಷ್ಯ ನುಡಿದಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ವಿಡಿಯೊ ಶೇರ್‌ಮಾಡಿರುವ ಅವರು, ಹಿಜಾಬ್‍ನ್ನು ಧರಿಸಿ ಕಾಲೇಜಿಗೂ ಹೋಗುತ್ತಾರೆ. ಹಿಜಾಬ್ ಧರಿಸಿಯೇ ಡಾಕ್ಟರ್, ಜಿಲ್ಲಾಧಿಕಾರಿಯಂತಹ ವಿವಿಧ ಕ್ಷೇತ್ರದಲ್ಲಿ ಉತ್ತಮ ಹೆಸರನ್ನು ಗಳಿಸುತ್ತಾರೆ. ಹಿಜಾಬ್ ಧರಿಸಿದ ಮಹಿಳೆಯೇ ಮುಂದೊಂದು ದಿನ ಪ್ರಧಾನಿಯಾಗುತ್ತಾರೆ. ಇದನ್ನು ನೋಡಲು ನಾನು ಬದುಕಿರುತ್ತೇನೋ, ಇಲ್ಲವೋ ಎತಿಳಿದಿಲ್ಲ. ಆದರೆ ನಾನು ಹೇಳಿದ ಮಾತು ಒಂದು ದಿನ ನಿಜವಾಗುತ್ತದೆ ಎಂದು ಹೇಳಿದ್ದಾರೆ.

ಹಿಜಾಬ್ ಧರಿಸಿದ ಕಾರಣಕ್ಕಾಗಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಿದ ನಂತರ ಭುಗಿಲೆದ್ದ ಕರ್ನಾಟಕದ ಹಿಜಾಬ್ ವಿವಾದ ನಡುವೆ ಓವೈಸಿ ಈ ಹೇಳಿಕೆ ನೀಡಿದ್ದಾರೆ.
ಹೆಣ್ಣು ಮಕ್ಕಳು ಹಿಜಾಬ್ ಧರಿಸಲು ನಿರ್ಧರಿಸಿ ಅದನ್ನು ಪೋಷಕರಿಗೆ ತಿಳಿಸಿದರೆ ಅದನ್ನು ಪೋಷಕರು ಬೆಂಬಲಿಸುತ್ತಾರೆ. ಆಗ ಅದನ್ನು ಯಾರು ತಡೆಯುತ್ತಾರೆ ನೋಡೋಣ ಎಂದು ಸವಾಲು ಹಾಕಿದರು.
ಈ ವಿಡಿಯೋ ಉತ್ತರಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆಸಿದ ಸಂದರ್ಭದಲ್ಲಿ ಮಾತನಾಡಿದ್ದಾಗಿದೆ. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕಿಡಿಕಾರಿದ ಅವರು, ಮೋದಿ ಅವರು ಮುಸ್ಲಿಂ ಮಹಿಳೆಯರ ಹಕ್ಕು ರಕ್ಷಣೆ, ಸಬಲೀಕರಣದ ಬಗ್ಗೆ ಮಾತನಾಡುತ್ತಾರೆ. ಆಗ ತ್ರಿವಳಿ ತಲಾಖ್ ಕಾನೂನನ್ನು ಅವರು ಉಲ್ಲೇಖಿಸುತ್ತಾರೆ. ಆದರೆ ಈಗ ಹಿಜಾಬ್ ಇಷ್ಟು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದರೂ ಮೌನವಾಗಿದ್ದಾರೆ. ಹಿಜಾಬ್ ಮುಸ್ಲಿಂ ಹುಡುಗಿಯರ ಹಕ್ಕು. ಆದರೆ ಅದನ್ನು ಧರಿಸಲು ನಿರಾಕರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಇಂದಿನ ಪ್ರಮುಖ ಸುದ್ದಿ :-   ಬೇರೊಂದು ಧರ್ಮಕ್ಕೆ ಮತಾಂತರಗೊಂಡ ಬಳಿಕ ಜಾತಿಯಾಧಾರಿತ ಮೀಸಲಾತಿ ಬಯಸುವಂತಿಲ್ಲ: ಮದ್ರಾಸ್‌ ಹೈಕೋರ್ಟ್‌

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement