ಅಂಕೋಲಾ: ರಸ್ತೆ ಕಾರ್ಮಿಕರ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ

ಕಾರವಾರ: ರಸ್ತೆ ಕೆಲಸಕ್ಕೆ ತೆರಳಿದ್ದ ಕಾರ್ಮಿಕರ ವಾಹನ ಪಲ್ಟಿಯಾಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಆಚವೆ ಗ್ರಾಪಂ ವ್ಯಾಪ್ತಿಯ ವಾಡಗಾರದಲ್ಲಿನಡೆದಿದೆ.
ಅಂಕೋಲಾ ತಾಲೂಕಿನ ವಾಡಗಾರ ಘಟ್ಟದ ಪ್ರದೇಶದ ಶನಿವಾರ  ಈ ಘಟನೆ ನಡೆದಿದ್ದು,   ಟಾಟಾ 407 ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯರು, ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯರು ತಮ್ಮ ವಾಹನದಲ್ಲಿ ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡ ಕಾರ್ಮಿಕರ ಬಗ್ಗೆ ವಿವರ ತಿಳಿದುಬರಬೇಕಿದೆ.
ಅಪಘಾತ ನಡೆದ ಸ್ಥಳ ತಾಲೂಕು ಕೇಂದ್ರದಿಂದ ದೂರವಿರುವುದರಿಂದ ಸ್ಥಳದಲ್ಲಿ ಯಾವುದೇ ಆಂಬುಲೆನ್ಸ್ ಇಲ್ಲದ ಕಾರಣ ಸ್ಥಳೀಯರು ತಕ್ಷಣ ಬಂದು ಗಾಯಾಳುಗಳನ್ನು ರಕ್ಷಿಸಿದ್ದಾರೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement