ಫೆಬ್ರುವರಿ 16 ರಿಂದ ಪಿಯು, ಪದವಿ ಕಾಲೇಜುಗಳು ಆರಂಭ : ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಬುಧವಾರದಿಂದ ಪಿಯುಸಿ ಹಾಗೂ ಪದವಿ ಕಾಲೇಜುಗಳು ಆರಂಭವಾಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಕಾಲೇಜುಗಳ ಆರಂಭ ಮಾಡುವ ಕುರಿತು ಇಂದು, ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೇಸ್‍ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಸಭೆ ನಂತರ ಮಾತನಾಡಿದ ಗೃಹ ಸಚಿವರು, ಬುಧವಾರದಿಂದ ಪಿಯು ಮತ್ತು ಡಿಗ್ರಿ ಕಾಲೇಜ್ ಗಳು ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ಕೋರ್ಟ್ ಸೂಚನೆಗಳನ್ನು ಕಡ್ಡಾಯವಾಗಿ ಫಾಲೋ ಮಾಡಬೇಕು. ಪೋಷಕರು, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ. ಪೊಲೀಸ್ ಇಲಾಖೆ ಇದಕ್ಕೆ ಬೇಕಾದ ಬಂದೋಬಸ್ತ್ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಹೈಕೋರ್ಟ್​ ಆದೇಶ ಪಾಲಿಸಬೇಕು. ಅದನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಫೆಬ್ರವರಿ 16 ರಿಂದ ಪಿಯುಸಿ ಹಾಗೂ ಪದವಿ ತರಗತಿಗಳು ಆರಂಭವಾಗಲಿವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸಭೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಹಾಗೂ ಇಲಾಖೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement