ಜಮೀರ್ ಹೇಳಿಕೆಯನ್ನು ಕಾಂಗ್ರೆಸ್‌ ಒಪ್ಪುವುದಿಲ್ಲ, ಅವರು ಕ್ಷಮೆ ಕೇಳಬೇಕು ಕೇಳ್ತೇನೆ:ಡಿಕೆಶಿ

ಬೆಂಗಳೂರು: ಬುರ್ಖಾ ಧರಿಸದ ಕಾರಣಕ್ಕೆ ದೇಶದಲ್ಲಿ ಅತ್ಯಾಚಾರಗಳು ಹೆಚ್ಚಾಗುತ್ತವೆ ಎಂಬ ಜಮೀರ್ ಅಹ್ಮದ್ ಖಾನ್ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ಅವರು ಆ ಮಾತನ್ನು ಹಿಂಪಡೆಯಲು ಹೇಳುತ್ತೇನೆ ಹಾಗೂ ಅವರು ಕ್ಷಮೆ ಕೇಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ಯಾರೂ ಮಾತನಾಡಬಾರದು ಎಂದು ಎಂದು ಸೂಚಿಸಿದ್ದೆ. ಆದರೂ ಕೆಲವರು ಮಾತನಾಡುತ್ತಿದ್ದಾರೆ‌. ಹಾಗಾಗಿ ವಿವರಣೆ ಕೇಳುತ್ತೇನೆ ಎಂದು ಹೇಳಿದ್ದಾರೆ.
ಹಿಜಾಬ್‌, ಪರ್ದಾ ಪದ್ಧತಿ ಇಲ್ಲದೆ ಭಾರತದಲ್ಲಿ ಅತ್ಯಾಚಾರಗಳು ಹೆಚ್ಚಾಗುತ್ತಿವೆ. ಯುವತಿಯರ ಸೌಂದರ್ಯ ರಕ್ಷಣೆಗೆ ಬುರ್ಖಾ, ಹಿಜಾಬ್ ರಕ್ಷಣೆ ನೀಡುತ್ತದೆ ಎಂದು ಶಾಸಕ ಜಮೀರ್ ಹೇಳಿದ್ದರು.

ಈ ಬಗ್ಗೆ ಅವರಿಗೆ ಕಾರಣ ಕೇಳಿ ನೋಟಿಸ್ ಕೊಡುತ್ತೇವೆ ಕಾಂಗ್ರೆಸ್ ಪಕ್ಷವೂ ಅವರ ಈ ಹೇಳಿಕೆಯನ್ನು ಒಪ್ಪುವುದಿಲ್ಲ ಎಂದು ತಿಳಿಸಿದ್ದಾರೆ.
ಸಚಿವ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಅವರ ಮೇಲೆ ಪ್ರಕರಣದ ದಾಖಲಿಸಬೇಕು. ಮಂತ್ರಿಯಾದರೇನು, ಶಾಸಕರಾದರೇನು? ಅವರ ಮೇಲೆ ಮೊದಲು ಪ್ರಕರಣ ದಾಖಲಿಸಬೇಕು ಹಾಗೂ ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.
ರಾಷ್ಟ್ರಧ್ವಜದ ವಿಚಾರ ಸದನದಲ್ಲಿ ಪ್ರಸ್ತಾಪ ಮಾಡುತ್ತೇವೆ. ಈ ವಿಷಯದಲ್ಲಿ ನಾವು ಸುಮ್ಮನೆ ಕೂಡ್ರಲು‌ ಸಾಧ್ಯವೇ ಎಂದ ಅವರು, ಇದರ ಬಗ್ಗೆ ಪ್ರಸ್ತಾಪ ಮಾಡಲಿದ್ದೇವೆ, ರಾಷ್ಟ್ರ ಧ್ವಜದ ಬಗ್ಗೆ ಅವಹೇಳನ ಮಾಡುವವರು ದೇಶದ್ರೋಹಿಗಳು ಎಂದರು.
ಪೊಲೀಸ್ ಅಧಿಕಾರಿಗಳನ್ನ ಸರ್ಕಾರ ಬಳಸಿಕೊಳ್ಳುತ್ತಿದೆ. ಅವರ ಪಾರ್ಟಿಯವರ ಮೇಲೆ ಪ್ರಕರಣ ಹಾಕುವುದಿಲ್ಲ. ರಾಜ್ಯ ಸರ್ಕಾರ ದ್ವಿಮುಖ ನೀತಿ ಅನುಸಿರುಸುತ್ತಿದೆ. ರೈತರ ಮೇಲೆ ಪ್ರಕರಣ ದಾಖಲಿಸುತ್ತಾರೆ, ಸಣ್ಣ ಪುಟ್ಟವರ ಮೇಲೆ ಪ್ರಕರಣ ಹಾಕುತ್ತಾರೆ, ದೇಶದ್ರೋಹಿಗಳ ಮೇಲೆ ಯಾಕೆ ಪ್ರಕರಣ ದಾಖಲಿಸುವುದಿಲ್ಲ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಮಕ್ಕಳಿಗೆ ಶಾಲಾ ಕಾಲೇಜುಗಳಲ್ಲಿ ಅನ್ಯಾಯವಾಗುತ್ತಿದೆ. ಬಿಟ್ ಕಾಯಿನ್, 40% ಕಮೀಷನ್ ಆರೋಪವಿದೆ. ಅದಕ್ಕೆ ಮಕ್ಕಳನ್ನು ಎತ್ತಿ ಕಟ್ಟುತ್ತಿದ್ದಾರೆ. ಹೀಗಾಗಿ ನಾವು ಸದನದಲ್ಲಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ಮಾಡಿದ್ದೇವೆ ಎಂದರು.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement