ಶಿವಮೊಗ್ಗ: ಹಿಜಾಬ್​ ಧರಿಸಲು ಅವಕಾಶ ನೀಡದ್ದಕ್ಕೆ ಪರೀಕ್ಷೆ ಬಹಿಷ್ಕರಿಸಿದ 13 ವಿದ್ಯಾರ್ಥಿನಿಯರು

ಶಿವಮೊಗ್ಗ: ನಗರದಲ್ಲಿ ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಕಾರಣ ವಿದ್ಯಾರ್ಥಿನಿಯರು ಪರೀಕ್ಷೆಯನ್ನೇ ಬಹಿಷ್ಕರಿಸಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಶಿವಮೊಗ್ಗದ ಮೇನ್ ಮಿಡ್ಲ್ ಸ್ಕೂಲ್​​ನಲ್ಲಿ ಇಂದು, ಸೋಮವಾರ ಎಸ್​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿತ್ತು. ಹೈಕೋರ್ಟ್‌ ಮಧ್ಯಂತರ ಆದೇಶದ ಮಧ್ಯೆಯೂ 13 ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿಯೇ ಪರೀಕ್ಷೆಗೆ ಬಂದಿದ್ದರು. ಹೈಕೋರ್ಟ್‌ ಮಧಯಂತರ ಆದೇಶದ ಹಿನ್ನೆಲೆಯಲ್ಲಿ ಸಿಬ್ಬಂದಿ ಹಿಜಾಬ್​ ತೆಗೆದು ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿನಯರಿಗೆ ಸೂಚಿಸಿದ್ದಾರೆ. ಆದರೆ, ಇದಕ್ಕೆ ವಿದ್ಯಾರ್ಥಿಗಳು ಒಪ್ಪಲಿಲ್ಲ. ಹೈಕೋರ್ಟ್​ ಆದೇಶ ಪಾಲಿಸುವಂತೆ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರೂ ಕೇಳದ 13 ವಿದ್ಯಾರ್ಥಿನಿಯರು ಕೊನೆಗೆಪರೀಕ್ಷೆಯನ್ನೇ ಬಹಿಷ್ಕರಿಸಿದ್ದಾರೆ ಎಂದು ವರದಿಯಾಗಿದೆ.

ಹಿಜಾಬ್ ವಿವಾದ ಕುರಿತು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯತ್ತಿದ್ದು, ತೀರ್ಪು ಬರುವವರೆಗೆ ಯಾವುದೇ ಧಾರ್ಮಿಕ ಉಡುಗೆ ಧರಿಸಿ ಶಾಲಾ ಕಾಲೇಜಿಗೆ ತೊಡುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement