ಹುಬ್ಬಳ್ಳಿ: ಸೌಂದರ್ಯ ಕಾಣದಿರಲು ಹಾಗೂ ತಮ್ಮ ರಕ್ಷಣೆಗಾಗಿ ಹಿಜಾಬ್ ಧರಿಸುತ್ತಾರೆ ಎಂದಿದ್ದೆ. ಈ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಗೊಂದಲ ಸೃಷ್ಟಿ ಮಾಡಲಾಗಿದೆ ಎಂದು ಮಾಜಿ ಸಚಿವ ಜಮೀರ ಅಹ್ಮದ್ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಿಜಾಬ್ ಹಾಕದಿದ್ದರೆ ಅತ್ಯಾಚಾರ ಆಗುತ್ತದೆಯೆಂದು ಎಂದು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.
ಹೇಳಿಕೆ ತಪ್ಪಾಗಿ ಅರ್ಥಯಸಿ ಗೊಂದಲ ಮಾಡಿಕೊಂಡರೆ ನಾನು ಏನು ಮಾಡಲು ಸಾಧ್ಯ. ಹಿಜಾಬ್ ಹಾಕಿದರೆ ಸೌಂದರ್ಯ ಕಾಣುವುದಿಲ್ಲ, ಹೀಗಾಗಿ ಹೆಣ್ಣು ಮಕ್ಕಳು ಸುರಕ್ಷತೆಗಾಗಿ
ಬೇರೆ ದೇಶಕ್ಕೆ ಹೋಲಿಸಿದರೆ ದೇಶದಲ್ಲಿ ರೇಪ್ ರೇಟ್ ಜಾಸ್ತಿ ಇದೆ. ಹಿಜಾಬ್ ಧರಿಸುವುದರಿಂದ ರಕ್ಷಣೆ ಸಿಗುತ್ತದೆ ಎಂದು ಹೇಳಿದ್ದೇನೆ ಅಷ್ಟೇ. ಹೆಲ್ಮೆಟ್ ಹಾಕಿಕೊಳ್ಳುವುದು ಸುರಕ್ಷತೆಗಾಗಿ ಅಲ್ಲವೇ? ಆದರೆ ನನ್ನ ಈ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಗೊಂದಲ ಸೃಷ್ಟಿ ಮಾಡಲಾಗಿದೆ ಎಂದು ತಿಳಿಸಿದರು.
ಹೈಕೋರ್ಟ್ ಹಿಜಾಬ್ ಕುರಿತು ನೀಡುವ ಆದೇಶಕ್ಕೆ ನಾವು ತಲೆ ಬಾಗುತ್ತೇವೆ ಎಂದು ಸ್ಪಷ್ಟಪಡಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ