ಕಲಬುರಗಿ: ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ರೈತ ಕಲ್ಲಪ್ಪ ಮೇತ್ರೆ ಅವರಿಗೆ ಪರಿಹಾರ ನೀಡುವಲ್ಲಿ ವಿಳಂಬವಾದ ಕಾರಣಕ್ಕೆ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರ ಸರ್ಕಾರಿ ಕಾರು ಜಪ್ತಿ ಮಾಡುವಂತೆ ಕಲಬುರಗಿಯ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆದೇಶಿಸಿದೆ.
ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ರೈತ 2008ರಲ್ಲಿ ರೈತ ಕಲ್ಲಪ್ಪ ಮೇತ್ರೆಯ 33 ಗುಂಟೆ ಜಮೀನು ಭೀಮಾ ಏತ ನಿರಾವರಿ ಯೋಜನೆಯಲ್ಲಿ ಮುಳುಗಡೆಯಾಗಿತ್ತು. ಮುಳುಗಡೆಯಾದ ಜಮೀನಿಗೆ 739632 ರೂ.ಗಳ ಪರಿಹಾರ ನೀಡವಂತೆ ಕೋರ್ಟ್ ಆದೇಶ ಮಾಡಿತ್ತು. ಕೋರ್ಟ್ ಆದೇಶ ಮಾಡಿದರೂ ಜಿಲ್ಲಾಡಳಿತದಿಂದ ಪರಿಹಾರ ನೀಡದ ಕಾರಣ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು ಹಾಗೂ ಕಾರು ಜಪ್ತಿಗೆ ಆದೇಶ ಮಾಡಿದೆ. ಕೋರ್ಟ್ ಆದೇಶದ ಹಿನ್ನೆಲೆ ಕಾರು ಜಪ್ತಿಗೆ ಕೋರ್ಟ್ ಸಿಬ್ಬಂದಿ ಮತ್ತು ವಕೀಲರು ಆಗಮಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ