ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 1,405 ಕೊರೊನಾ ಪ್ರಕರಣಗಳು ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 1,405 ಕೊರೊನಾ ವೈರಸ್ ಹೊಸ ಪ್ರಕರಣಗಳು ದಾಖಲಾಗಿದೆ. ಇದೇವೇಳೆ ಮಂಗಳವಾರ ಕೂಡಾ 5,762 ಕೊರೊನಾ ವೈರಸ್ ಸೋಂಕಿತರು ರಾಜ್ಯಾದ್ಯಂತ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಹಾಗೂ ಚಿಕಿತ್ಸೆ ಫಲಿಸದೇ 26 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಈವರೆಗೆ ದೃಢಪಟ್ಟ ಒಟ್ಟು ಕೊರೊನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ 39,29,642ಕ್ಕೆ ಏರಿದೆ.
ರಾಜ್ಯದಲ್ಲಿ ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 38,63,085ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 26,832ಕ್ಕೆ ಇಳಿಕೆ ಕಂಡಿದೆ. ರಾಜ್ಯದಲ್ಲಿ ಈವರೆಗೆ 39,691ಕ್ಕೆ ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದ ಕೋವಿಡ್ ಪಾಸಿಟಿವಿಟಿ ದರ ಮಂಗಳವಾರ ಶೇ.1.91ಕ್ಕೆ ಇಳಿದಿದೆ. ರಾಜ್ಯಾದ್ಯಂತ ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕು ಲಕ್ಷಣವುಳ್ಳ ಒಟ್ಟು 73,286 ಮಂದಿಯನ್ನು ಕೋವಿಡ್ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ.

ಜಿಲ್ಲಾವಾರು ಸೋಂಕಿನ ಮಾಹಿತಿ…
ಬಾಗಲಕೋಟೆ 11, ಬಳ್ಳಾರಿ 26, ಬೆಳಗಾವಿ 50, ಬೆಂಗಳೂರು ಗ್ರಾಮಾಂತರ 11, ಬೀದರ್ 07, ಚಾಮರಾಜನಗರ 29, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರು 12, ಚಿತ್ರದುರ್ಗ 31, ದಕ್ಷಿಣ ಕನ್ನಡ 47, ದಾವಣಗೆರೆ 09, ಧಾರವಾಡ 32, ಗದಗ 18, ಹಾಸನ 13, ಹಾವೇರಿ 13, ಕಲಬುರಗಿ 14, ಕೊಡಗು 20, ಕೋಲಾರ 11, ಕೊಪ್ಪಳ 08, ಮಂಡ್ಯ 13, ಮೈಸೂರು 66, ರಾಯಚೂರು 02, ರಾಮನಗರ 19, ಶಿವಮೊಗ್ಗ 36, ತುಮಕೂರು 48, ಉಡುಪಿ 50, ಉತ್ತರ ಕನ್ನಡ 17, ವಿಜಯಪುರ 11 ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಒಟ್ಟು 04 ಪ್ರಕರಣಗಳು ಮಂಗಳವಾರ ವರದಿಯಾಗಿವೆ.

ಪ್ರಮುಖ ಸುದ್ದಿ :-   ಪ್ರಧಾನಿಯವರು ಪತ್ರಿಕಾಗೋಷ್ಠಿಗಳನ್ನು ಏಕೆ ನಡೆಸುವುದಿಲ್ಲ? : ಹೆಚ್ಚು ಸಲ ಕೇಳಿದ ಪ್ರಶ್ನೆಗೆ ಕೊನೆಗೂ ಉತ್ತರಿಸಿದ ನರೇಂದ್ರ ಮೋದಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement