ಬಿಬಿಎಂಪಿ ರಸ್ತೆ ಗುಂಡಿ ಪ್ರಕರಣ: ಪ್ರಧಾನ ಎಂಜಿನಿಯರ್‌ ವಿರುದ್ಧ ಜಾಮೀನು ಸಹಿತ ವಾರೆಂಟ್‌ ಹೊರಡಿಸಿದ ಹೈಕೋರ್ಟ್‌

ಬೆಂಗಳೂರು: ನ್ಯಾಯಾಲಯದ ಆದೇಶ ಪಾಲಿಸಲು ವಿಫಲವಾಗಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಧಾನ ಎಂಜಿನಿಯರ್‌ ವಿರುದ್ಧ ಮಂಗಳವಾರ ಜಾಮೀನು ಸಹಿತ ವಾರೆಂಟ್‌ ಹೊರಡಿಸಿರುವ ಕರ್ನಾಟಕ ಹೈಕೋರ್ಟ್‌, ಅಧಿಕಾರಿಯನ್ನು ವಶಕ್ಕೆ ಪಡೆದು ಗುರುವಾರ (ಫೆ. 17) ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿ ಮಹತ್ವದ ಆದೇಶ ಮಾಡಿದೆ.
ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ವಿಜಯನ್‌ ಮೆನನ್‌ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮನವಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
ಪ್ರಕರಣದ ವಿಚಾರಣೆ ಆರಂಭವಾದಾಗ ಬಿಬಿಎಂಪಿ ಪರ ವಕೀಲ ವಿ ಶ್ರೀನಿಧಿ ಅವರು ಪ್ರಧಾನ ಎಂಜಿನಿಯರ್‌ ಹಾಜರಾತಿಗೆ ವಿನಾಯಿತಿ ಕೋರಿದರು.
ಇದರಿಂದ ಆಕ್ರೋಶಗೊಂಡ ಪೀಠವು “ಖುದ್ದು ಹಾಜರಾತಿಯಿಂದ ವಿನಾಯಿತಿ ಕೋರುವ ರೀತಿ ಇದಲ್ಲ. ದಿನದ ಕಲಾಪ ಆರಂಭವಾಗುತ್ತಿದ್ದಂತೆಯೇ ಅರ್ಜಿ ಸಲ್ಲಿಸಿ ಮನವಿ ಮಾಡಬೇಕು. ಪ್ರಕ ಇದನ್ನು ಒಪ್ಪಲು ಸಾಧ್ಯವಿಲ್ಲ. ನಿಮ್ಮ ಪ್ರಧಾನ ಎಂಜಿನಿಯರ್‌ ವಿರುದ್ಧ ಜಾಮೀನು ಸಹಿತ ವಾರಂಟ್ ಹೊರಡಿಸುತ್ತೇವೆ” ಎಂದು ಕಟುವಾಗಿ ನುಡಿಯಿತು. ಅಂತೆಯೇ, ಆದೇಶ ಹೊರಡಿಸಿದೆ.
ಈಗ ಜಾಮೀನು ಸಹಿತ ವಾರಂಟ್ ಜಾರಿಗೊಳಿಸಲಾಗಿದೆ. ಇದಕ್ಕಿಂತ ಕಠಿಣ ಆದೇಶ ಹೊರಡಿಸಲು ನ್ಯಾಯಾಲಯವು ಹಿಂದೇಟು ಹಾಕುವುದಿಲ್ಲ. ಜಾಮೀನು ರಹಿತ ವಾರಂಟ್ ಹೊರಡಿಸುವುದು ನಮಗೆ ಕಷ್ಟವಲ್ಲ ಎಂದೂ ಪೀಠವು ಮೌಖಿಕವಾಗಿ ಸ್ಪಷ್ಟಪಡಿಸಿದೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement