ವೇಗದ ರೈಲು ಡಿಕ್ಕಿ ಹೊಡೆಯುವುದರಿಂದ ಕೂದಲೆಳೆಯಲ್ಲಿ ಪಾರಾದ ಬೈಕ್‌ ಸವಾರ, ಬೈಕ್‌ ಛಿದ್ರ ಛಿದ್ರ, ದೃಶ್ಯ ವಿಡಿಯೊದಲ್ಲಿ ಸೆರೆ

ಮುಂಬೈ: ವೇಗವಾಗಿ ಬರುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಕೂದಲೆಳೆಯ ಹಂತರದಲ್ಲಿ ಸಾವಿನ ದವಡೆಯಿಂದ ಪಾರಾದ ಘಟನೆ ಮುಂಬೈನ ರೈಲ್ವೆ ಕ್ರಾಸಿಂಗ್‌ ಬಳಿ ನಡೆದಿದೆ.

ಘಟನೆಯ ಸಿಸಿಟಿವಿ ವಿಡಿಯೊದಲ್ಲಿ ಸೆರೆಯಾಗಿದ್ದು, ಅದರಲ್ಲಿ ಸವಾರ ಸ್ವಲ್ಪದರಲ್ಲೇ ಪಾರಾಗಿರುವುದು ಕಂಡುಬರುತ್ತದೆ. ಗೇಟ್‌ಗಳಿಲ್ಲದ ರೈಲ್ವೆ ಕ್ರಾಸಿಂಗ್ ಆಗಿದ್ದು, ಮುನ್ನೆಚರಿಕೆ ಇದ್ದರೂ ಈತ ರೈಲ್ವೆ ಛೇದಕವನ್ನು ದಾಟಲು ಪ್ರಯತ್ನಿಸಿದ್ದಾ ಸವಾರ ಪ್ರಯತ್ನಿಸಿದ್ದಾನೆ. ಆದರೆ ಅದೃಷ್ಟ ಚೆನ್ನಾಗಿದ್ದಿದ್ದರಿಂದ ಬದುಕುಳಿದಿದ್ದಾನೆ. ಇದು ಫೆಬ್ರವರಿ 12 ರಂದು ಸಂಜೆ 6:18 ರ ಸುಮಾರಿಗೆ ನಡೆದಿದೆ.
ವಿಡಿಯೊದಲ್ಲಿ, ಸವಾರನು ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ಅವಸರ ಅವಸರವಾಗಿ ರೈಲ್ವೆ ಹಳಿ ದಾಟುತ್ತಿರುವುದನ್ನು ಕಾಣಬಹುದು. ಆದರೆ, ಬೈಕಿನ ಟೈರ್ ರೈಲು ಹಳಿಯಲ್ಲಿ ಸಿಲುಕಿಕೊಂಡಿದೆ. ಕೂಡಲೇ ಈತ ಬೈಕ್‌ ಬಿಟ್ಟು ಹಿಂದೆ ಸರಿದಿದ್ದಾನೆ. ಇದೇ ಕ್ಷಣಕ್ಕೆ ವೇಗವಾದ ರೈಲೊಂದು ಆ ಹಳಿಯಲ್ಲಿ ಪಾಸಾಗಿದೆ. ಪರಿಣಾಮ ಬೈಕ್ ಛಿದ್ರಗೊಂಡು ದೂರ ಎಸೆಯಲ್ಪಟ್ಟಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement