ಬೆಂಗಳೂರು: ಹಿರಿಯ ನಟಿ, ರಂಗಭೂಮಿ ಕಲಾವಿದೆ ಭಾರ್ಗವಿ ನಾರಾಯಣ ಸೋಮವಾರ (84 ವರ್ಷ ) ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದು, ಅವರ ಇಚ್ಛೆಯಂತೆ ನೇತ್ರದಾನ ಹಾಗೂ ದೇಹದಾನ ಮಾಡಲು ಕುಟುಂಬದವರು ನಿರ್ಧರಿಸಿದ್ದಾರೆ.
ಈಗಾಗಲೇ ಕಣ್ಣುಗಳನ್ನು ದಾನ ಮಾಡಲಾಗಿದ್ದು, ಖಾಸಗಿ ಆಸ್ಪತ್ರೆಗೆ ದೇಹದಾನ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಭಾರ್ಗವಿ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಭಾರ್ಗವಿ ನಾರಾಯಣ ಅವರದ್ದು ಕಲಾ ಕುಟುಂಬ. . ಭಾರ್ಗವಿ ಅವರ ಪತಿ ನಾರಾಯಣ ಅವರು ಮೇಕಪ್ ಕಲಾವಿದರಾಗಿದ್ದು ಹಾಗೂ ಮೇಕಪ್ ನಾಣಿ ಎಂದೇ ಖ್ಯಾತರಾಗಿದ್ದರು. ಅವರ ಪುತ್ರ ಪ್ರಕಾಶ ಬೆಳವಾಡಿ ರಂಗಭೂಮಿ ಹಾಗೂ ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಪುತ್ರಿ ಸುಧಾ ಬೆಳವಾಡಿ ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಸುಧಾ ಮಗಳು ಸಂಯುಕ್ತಾ ಹೊರನಾಡು (ಮೊಮ್ಮಗಳು) ಕನ್ನಡ ಚಿತ್ರರಂಗದಲ್ಲಿ ನಟಿಯಾಗಿದ್ದಾರೆ.
ಭಾರ್ಗವಿ 1960ರ ದಶಕದಲ್ಲೇ ಪ್ರೊ. ಹುಚ್ಚುರಾಯ’ ಚಿತ್ರದಲ್ಲಿ ಅವರು ಪೋಷಕ ಪಾತ್ರ ಮಾಡಿದ್ದರು. ಈ ಚಿತ್ರಕ್ಕೆ ಅವರಿಗೆ ಅತ್ಯುತ್ತಮ ಪೋಷಕ ನಟಿಯಾಗಿ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. 2012ರಲ್ಲಿ ‘ನಾನು, ಭಾರ್ಗವಿ’ ಎಂಬ ಅವರ ಆತ್ಮಕಥನಕ್ಕೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು.


ನಿಮ್ಮ ಕಾಮೆಂಟ್ ಬರೆಯಿರಿ